ಕನ್ನಡ ವಾರ್ತೆಗಳು

ಕೋಟಿ ಶ್ರೀ ವೆಂಕಟೇಶ ಮಂತ್ರ (ಲಿಖಿತ) ಜಪ ಮಹಾಯಜ್ಞ

Pinterest LinkedIn Tumblr

ಕುಂದಾಪುರ: ಗಂಗೊಳ್ಳಿಯ ನಿನಾದ ಸಂಸ್ಥೆಯ ದಶಮಾನೋತ್ಸವ ಸಮಾರೋಪ ಸಮಾರಂಭ ಪ್ರಯುಕ್ತ ಗುರುವಾರ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕೋಟಿ ಶ್ರೀ ವೆಂಕಟೇಶ ಮಂತ್ರ (ಲಿಖಿತ) ಜಪ ಮಹಾಯಜ್ಞ ಜರಗಿತು.

Gangolli_Yajna_Karya

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಶ್ರೀ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಯಜ್ಞದ ಧಾರ್ಮಿಕ ವಿಧಿವಿಧಾನಗಳು ಜರಗಿದವು.

ದೇವಳದ ಆಡಳಿತ ಮೊಕ್ತೇಸರ ಬೈಲೂರು ಮಂಜುನಾಥ ಶೆಣೈ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ, ವೇದಮೂರ್ತಿ ಜಿ.ವಸಂತ ಭಟ್, ಸೇವಾದಾರ ಕುಟುಂಬಸ್ಥರಾದ ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ಜಿ.ಗೋವರ್ಧನ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ಜಿ.ಶಂಕರ ಕೆ.ಆಚಾರ್ಯ, ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ, ಆಚಾರ್ಯ ಕುಟುಂಬಸ್ಥರು, ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ನಿನಾದ ಸಂಸ್ಥೆಯ ಪದಾಧಿಕಾರಿಗಳು, ದೇವಳದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಪರ ಊರಿನ ಭಜಕರು, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

Write A Comment