ಮಂಗಳೂರು, ಮೇ.23: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆ ನಿಮಿತ್ತ ಚುನಾವಣೆ ನಡೆಯುವ ಎಲ್ಲಾ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮೇ 28ರ ಮದ್ಯರಾತ್ರಿಯಿಂದ ಮೇ 29 ರ ಮಧ್ಯರಾತ್ರಿಯ ತನಕ ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಲಾಗಿದೆ. ಈ ದಿನಗಳಲ್ಲಿ ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟದ ಪರವಾನಗಿ ಇರುವಂತ ಅಂಗಡಿಗಳನ್ನು ಹಾಗೂ ಮಾರಾಟ ಕೆಂದ್ರಗಳನ್ನು ಮುಚ್ಚಲು ದ.ಕ.ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಆದೇಶಿಸಿರತ್ತಾರೆ.