ಕನ್ನಡ ವಾರ್ತೆಗಳು

ರೈತರಿಗೆ ಸಮಗ್ರ ಕೃಷಿ ಮಾಹಿತಿ ನೀಡುವ ಹೋಬಳಿ ಮಟ್ಟದ ಕೃಷಿ ಅಭಿಯಾನ .

Pinterest LinkedIn Tumblr

Dc_Ibrahim_Pics

ಮಂಗಳೂರು, ಜೂನ್ .01:  ಈ ಸಾಲಿನಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಮತ್ತು ಎಲ್ಲಾ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಠ ಕಾರ್ಯಕ್ರಮವನ್ನು ಎಲ್ಲಾ ಹೋಬಳಿಗಳಲ್ಲಿ ರಾಜ್ಯ ಸರಕಾರವು ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.

ಅವರು ಸೋಮವಾರ ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿ ಅಭಿಯಾನ ಕಾರ್ಯ ಕ್ರಮವನ್ನು ಹೋಬಳಿ ಮಟ್ಟದಲ್ಲಿ ಮೂರು ದಿನಗಳ ಕಾಲ ನಡೆಯಲಿದೆ. ವಿಜ್ಞಾನಿಗಳು ಮತ್ತು ಅಧಿಕಾರಿಗಳ ತಂಡವು ರೈತರೊಂದಿಗೆ ಸಂವಾದ, ಕೃಷಿ ಹಾಗೂ ಬೇಸಾಯ ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ಉತ್ಪಾದಕತೆ ಹೆಚ್ಚಿಸುವ ತಾಂತ್ರಿಕತೆಗಳ ಮನವರಿಕೆ ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಜೂನ್ ತಿಂಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಕೃಷಿ ಮತ್ತು ಬೇಸಾಯ ಸಂಬಂಧಿತ ಇಲಾಖಾಧಿಕಾರಿಗಳು, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಪಾಲನೆ, ಸಹಕಾರ ಇಲಾಖೆಗಳು, ಪಶುವೈದ್ಯಕೀಯ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರಗಳ ವಿಜ್ಞಾನಿಗಳು, ರೈತರು, ಜನಪ್ರತಿನಿಧಿಗಳು, ಕೃಷಿ ಪರಿಕರ ಸರಬರಾಜುದಾರರು, ಸಾಲ ಸೌಲಭ್ಯ ನೀಡುವ ಸಂಸ್ಥೆಗಳು, ಸಾವಯವ ಕೃಷಿ ಸಂಘಟನೆಗಳು, ಸ್ವಸಹಾಯ ಹಾಗೂ ಆತ್ಮಗುಂಪುಗಳು ಇದರಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಎಲ್ಲಾ ಹೋಬಳಿಗಳಲ್ಲೂ ಈ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಸ್ಥಳೀಯವಾಗಿ ಬೆಳೆದ ತರಕಾರಿಗಳಿಗೆ ಹೆಚ್ಚು ಬೇಡಿಕೆಯಿದೆ. ಈ ನಿಟ್ಟಿನಲ್ಲಿ ತರಕಾರಿ ಕೃಷಿಯನ್ನು ಇನ್ನಷ್ಟು ಆಕರ್ಷಯುತವಾಗಿಸುವ ನಿಟ್ಟಿನಲ್ಲಿ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ನಡೆಯಬೇಕಿದೆ. ಜಿಲ್ಲಾಧಿಕಾರಿಗಳ ಕಚೇರಿಯ ಮಹಡಿಯ ಆವರಣದಲ್ಲಿರುವ ಖಾಲಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಂಬಂಧಿತ ಎಲ್ಲಾ ಇಲಾಖೆಗಳು ಸೇರಿ ಸ್ಪಷ್ಟವಾದ ರೂಪುರೇಷೆಗಳನ್ನು ಸಿದ್ಧಗೊಳಿಸಿ ಸಲ್ಲಿಸುವಂತೆ ಎ.ಬಿ. ಇಬ್ರಾಹಿಂ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವಿದ್ಯಾ, ಜಂಟೀ ಕೃಷಿ ನಿರ್ದೇಶಕ ಕೆಂಪೇಗೌಡ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Write A Comment