ಕನ್ನಡ ವಾರ್ತೆಗಳು

ವಿಮಾನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ರೂ ಮೌಲ್ಯದ ಚಿನ್ನದ ಬಿಸ್ಕೇಟ್ ವಶ

Pinterest LinkedIn Tumblr

Gold-Buskit_Smugal

ಮಂಗಳೂರು: ವಿಮಾನದ ಶೌಚಾಲಯದಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 60 ಲಕ್ಷ ರೂ ಮೌಲ್ಯದ ಚಿನ್ನದ ಬಿಸ್ಕೇಟ್ ಅನ್ನು ಮಂಗಳೂರು ಅಂತಾರಾಷ್ಟ್ರೀಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಶನಿವಾರ ಬಜ್ಪೆ ಏರ್‌ಪೋರ್ಟ್‌ನಲ್ಲಿ ನಡೆದಿದೆ.

ದುಬೈನಿಂದ ಮಂಗಳೂರಿನ ಬಜ್ಪೆ ಏರ್‌ಪೋರ್ಟ್‌ಗೆ ಬಂದಿಳಿದ ಜೆಟ್ ಏರ್‌‌‌ವೇಸ್‌‌ ವಿಮಾನ ಸಂಖ್ಯೆ 9 ಡಬ್ಲ್ಯೂ 531ರಲ್ಲಿ ಮಂಗಳೂರಿನಲ್ಲಿ ಇಳಿಯಬೇಕಿದ್ದ ಪ್ರಯಾಣಿಕನೊಬ್ಬ ತಲಾ 100 ಗ್ರಾಂ. ತೂಕದ 22 ಚಿನ್ನದ ಗಟ್ಟಿಗಳನ್ನು ವಿಮಾನದ ಶೌಚಾಲಯದಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ತನಿಖೆ ಮುಂದುವರಿದಿದೆ.

Write A Comment