ಕನ್ನಡ ವಾರ್ತೆಗಳು

ಬಾಲ ಕಾರ್ಮಿಕ ಪದ್ಧತಿ ಕಾನೂನಿಗಿಂತ ಜನರಲ್ಲಿ ಅರಿವು ಮೂಡಿದರೆ ಮಾತ್ರ ನಿರ್ಮೂಲನೆ ಸಾಧ್ಯ : ಸಿ.ಎಂ.ಜೋಷಿ

Pinterest LinkedIn Tumblr

Zp_news_photo_1

ಮಂಗಳೂರು, ಜೂನ್. 12 : ಅತ್ಯಂತ ಹೇಯ ಪದ್ಧತಿಯಾದ ಬಾಲಕರ ಹಕ್ಕನ್ನು ಕಸಿದುಕೊಂಡು ಅವರನ್ನು ದುಡಿಮೆಗೆ ಹಚ್ಚುವ ಅಮಾನವೀಯ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾನೂನಿಗಿಂತ ಜನರಲ್ಲಿ ಜಾಗೃತಿ ಮೂಡಿಸಿದರೆ ಮಾತ್ರ ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಎಂ.ಜೋಷಿ ಅವರು ತಮ್ಮ ಅಭಿಪ್ರಾಯ ಸೂಚಿಸಿದ್ದಾರೆ. ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಜಿಲ್ಲಾಡಳಿತ,ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇನ್ನಿತರ ಸಂಘಸಂಸ್ಥೆಗಳ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಗಾರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

Zp_news_photo_4 Zp_news_photo_2 Zp_news_photo_3

ಸಮಾರಂಭವನ್ನು ಉದ್ಘಾಟಿಸಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮಾತನಾಡಿ ದೇಶದಲ್ಲಿ ಕೈಗಾರಿಕಾ ಕ್ರಾಂತಿ ಆರಂಭವಾದ ದಿನಗಳಲ್ಲಿ ಮಕ್ಕಳ ಶೋಷಣೆ ಆರಂಭವಾಗಿದ್ದು,ಅದು ಇಂದಿಗೂ ಅವ್ಯಾಹತವಾಗಿದೆ. ಇಂತಹ ಅಮಾನವೀಯ ಪದ್ಧತಿಗೆ ಕೊನೆ ಹಾಡಬೇಕಿದೆ ಎಂದು ತಿಳಿಸಿ ದ.ಕ.ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಸಂಖ್ಯೆ ಇತರೆಡೆಗಿಂತ ಕಡಿಮೆ ಇದೆ.ನಮ್ಮ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾ ಆಡಳಿತದೊಂದಿಗೆ ಎಲ್ಲಾ ಸ್ವಯಂ ಸೇವಾ ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಕರೆಯಿತ್ತರು.

ಸಭೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಶರಣಪ್ಪ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚಂಗಪ್ಪ ಮುಂತಾದವರು ಭಾಗವಹಿಸಿದ್ದರು.

Zp_news_photo_5 Zp_news_photo_6 Zp_news_photo_7 Zp_news_photo_8

ಸಮಾರಂಭಕ್ಕೂ ಮುನ್ನ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಜನರಲ್ಲಿ ಅರಿವು ಮೂಡಿಸಲು ಉರ್ವಾಸ್ಟೋರ್ ನಿಂದ ಜಿಲ್ಲಾ ಪಂಚಾಯತ್ ವರೆಗೆ ಜಾಥಾ ಹಮ್ಮಿಕೊಂಡಿದ್ದು, ಜಾಥಾವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಐ.ಪಿ.ಶ್ರೀವಿದ್ಯಾ ಉದ್ಘಾಟಿಸಿದರು.ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

Write A Comment