ಉಳ್ಳಾಲ, ಜೂ. 16: ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಪಂಚಾಯತ್ ನೂತನ ಸದಸ್ಯರು ಹಾಗೂ ಕಾರ್ಯಕರ್ತರ ಅಭಿನಂದನಾ ಸಮಾರಂಭ ಭಾನುವಾರ ದೇರಳಕಟ್ಟೆ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಮೂಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಕಾರ್ಯಕ್ರಮ ಉದೇಶಿಸಿ ಮಾತನಾಡಿದರು.
ಕಾರ್ಯಕ್ರಮ ಸಂಯೋಜಕ, ತಾಲೂಕು ಪಂಚಾಯಿತಿ ಸದಸ್ಯ ಮುಸ್ತಫಾ ಹರೇಕಳ, ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್, ತಾಲೂಕು ಪಂಚಾಯಿತಿ ಸದಸ್ಯರಾದ ಅಹ್ಮದ್ ಕುಂಞಿ, ಕ್ಲೇರಾ ಕುವೆಲ್ಲೋ, ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ನಝರ್ ಕೊಣಾಜೆ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ಸಂತೋಷ್ ಶೆಟ್ಟಿ, ಬೆಳ್ಮ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೂಸುಫ್ ಬಾವ, ಅಲ್ಪಸಂಖ್ಯಾತ ಘಟಕಾಧ್ಯಕ್ಷ ಪಿ.ಎಂ.ಕುಂಞಿ ಮೊದಲಾದವರು ಉಪಸ್ಥಿತರಿದ್ದರು.
