ಕನ್ನಡ ವಾರ್ತೆಗಳು

ವನಮಹೋತ್ಸವದಿಂದ ಪರಿಸರ ಜಾಗೃತಿ : ಸಚಿವ ಬಿ.ರಮಾನಾಥ ರೈ

Pinterest LinkedIn Tumblr

Vana_mahotsava_-Pics_1

ಮಂಗಳೂರು : ವನಮಹೋತ್ಸವ ಆಚರಣೆಯಿಂದ ಪರಿಸರ ಸಂರಕ್ಷಣೆಯ ಮಹತ್ವದ ಜಾಗೃತಿ ಮೂಡಿಸಲು ಸಾಧ್ಯವಾಗುತ್ತಿದೆ. ವನ್ಯ ಸಂಪತ್ತು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಮತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅರಣ್ಯ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆದ ವನಮಹೋತ್ಸವಕ್ಕೆ ಚಾಲನೆ ನೀಡಿದ ಅವರು ` ಅರಣ್ಯ ಇಲಾಖೆಯ ಲಕ್ಷ ವೃಕ್ಷ ಯೋಜನೆ ಈ ವರ್ಷವೂ ಮುಂದುವರಿದಿದೆ. ಜುಲೈ ತಿಂಗಳಲ್ಲಿ ರಾಜ್ಯದ ಎಲ್ಲ ಭಾಗದಲ್ಲಿ ಗಿಡ ನಡೆವ ಕಾರ್ಯಕ್ರಮ ನಡೆಯಲಿದ್ದು, ಸಾಕಷ್ಟು ಸಸಿಗಳು ಇಲಾಖೆಯಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಗಿಡ ನೆಡುವ ಮೂಲಕ ಸ್ವಚ್ಛ ಸುಂದರ ಪರಿಸರ ನಿರ್ಮಿಸಬೇಕು’ಎಂದರು.

Vana_mahotsava_-Pics_2 Vana_mahotsava_-Pics_3 Vana_mahotsava_-Pics_4 Vana_mahotsava_-Pics_5 Vana_mahotsava_-Pics_6

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂಜಯ ಬಿಜೂರ್,ಮಂಗಳೂರು ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೊ, ಕಾರ್ಪೋರೇಟರ್ ರೂಪಾ.ಡಿ.ಬಂಗೇರ, ವಾರ್ತಾಧಿಕಾರಿ ಖಾದರ್‌ ಶಾ ಮುಖ್ಯ ಅತಿಥಿಗಳಾಗಿದ್ದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ರಾಮಕೃಷ್ಣ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ವಂದಿಸಿದರು. ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

Write A Comment