ಕನ್ನಡ ವಾರ್ತೆಗಳು

ಕಾಂಗ್ರೆಸ್ ಸರ್ಕಾರದ ಆಡಳಿತ ವೈಕರಿ ಖಂಡಿಸಿ ಬಿಜೆಪಿ ಪ್ರತಿಭಟನೆ

Pinterest LinkedIn Tumblr

Bjp_Protest_Pics_1

ಮಂಗಳೂರು: ಕಾಂಗ್ರೆಸ್ ಸರ್ಕಾರದ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಸಂಸದ ನಳಿನ್‌‌‌ ಕುಮಾರ್ ಕಟೀಲ್ ಅವರು, ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಆಡಳಿತ ದಾರಿ ತಪ್ಪುತ್ತಿದ್ದರೂ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮಾಷೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.

Bjp_Protest_Pics_2 Bjp_Protest_Pics_3

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ದೇಶದ್ರೋಹಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಆಡಳಿತ ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚುತ್ತಿದೆ. ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದ್ದರೂ ಸರ್ಕಾರ ಮಾತ್ರ ಎಚ್ಚೆತ್ತುಕೊಂಡಿಲ್ಲ. ಸಚಿವರು ಕೊಲೆ, ಭ್ರಷ್ಟಾಚಾರ, ಹಗರಣ, ಅಧಿಕಾರದ ದುರುಪಯೋಗಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ನಿದ್ದೆಯಿಂದ ಎದ್ದೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

Write A Comment