ಕನ್ನಡ ವಾರ್ತೆಗಳು

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ ವಿರುದ್ಧ ದ.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಪ್ರತಿಭಟನೆ

Pinterest LinkedIn Tumblr

lowyer_protst_photo_1

ಮಂಗಳೂರು,ಜುಲೈ .02: ‘ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಅಲ್ಲದೆ, ಲೋಕಾಯುಕ್ತ ಭಾಸ್ಕರ ರಾವ್‌ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿ ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್‌.ಪಿ. ಚೆಂಗಪ್ಪ ಮಾತನಾಡಿ, ‘ಲೋಕಾಯುಕ್ತ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿಯನ್ನು ರಚಿಸಲಾಗಿದೆ. ಈ ಕ್ರಮ ಸಮಂಜಸವಾದುದಲ್ಲ. ತನಿಖಾ ಸಂಸ್ಥೆ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದರಿಂದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಸಿಬಿಐ ತನಿಖೆ ಮಾಡಿಸಬೇಕು’ ಎಂದು ಆಗ್ರಹಿಸಿದರು.

lowyer_protst_photo_2 lowyer_protst_photo_3

‘ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾಗಿರುವುದರಿಂದ ರಾಜ್ಯ ಸರ್ಕಾರ ಅದರಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಆದ್ದರಿಂದ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಧ್ಯ ಪ್ರವೇಶಿಸಿಸದೆ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ವಿ.ಕೆ. ಯಶೋಧರ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಯತೀಶ್‌ ಕುಮಾರ್‌, ಜಂಟಿ ಕಾರ್ಯದರ್ಶಿ ಸುಮನಾ ಶರಣ್‌ ಮೊದಲಾದವರು ಉಪಸ್ಥಿತರಿದ್ದರು.

Write A Comment