ಮಂಗಳೂರು, ಜು .11: ಬ್ಯಾಂಕ್‌ಗಳಂತೆ ಭಾರತೀಯ ಅಂಚೆ ಇಲಾಖೆ ವತಿಯಿಂದಲೂ ಎಟಿಎಂ ಆರಂಭಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಅಂಚೆ ಎಟಿಎಂ ನಗರದ ಪಾಂಡೇಶ್ವರದ ಪ್ರಧಾನ ಅಂಚೆ ಕಚೇರಿಯಲ್ಲಿ ಶುಕ್ರವಾರ ಆರಂಭಗೊಂಡಿದೆ. ಅಂಚೆ ಇಲಾಖೆಯ ಈ ಎಟಿಎಂನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.
ಅಂಚೆ ಇಲಾಖೆ ನಿವೃತ್ತ ಅಧಿಕಾರಿ ಎಸ್.ಗೋಪಾಲ್ ನೂತನ ಎಟಿಎಂನಿಂದ ಹಣ ಡ್ರಾ ಮಾಡುವ ಮೂಲಕ ಚಾಲನೆ ನೀಡಿದರು.
ಅಂಚೆ ಇಲಾಖೆ ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್, ಮಂಗಳೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕ ಜಗದೀಶ ಪೈ, ಮಂಗಳೂರು ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕ ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.
ಕೋರ್ ಬ್ಯಾಂಕಿಂಗ್ ಸೌಲಭ್ಯ ಇರುವ ಅಂಚೆ ಕಚೇರಿಗಳಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರು ಅಂಚೆ ಎಟಿಎಂ ಸೌಲಭ್ಯ ಪಡೆದುಕೊಳ್ಳಬಹುದು.

