ಕನ್ನಡ ವಾರ್ತೆಗಳು

ಕುಂದಾಪುರ: ಅಪ್ರಾಪ್ತ ಬಾಲಕಿ ಅಪಹರಣ, ಲೈಂಗಿಕ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

Pinterest LinkedIn Tumblr

ಕುಂದಾಪುರ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮೂರು ದಿನಗಳ ಕಾಲ ಲೈಂಗಿಕ ಹಿಂಸೆ ನೀಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

Kavradi_Pokso_youth Arrest

ಕುಂದಾಪುರ ತಾಲೂಕಿನ ಕಾವ್ರಾಡಿಯ ವಾಲ್ತೂರು ಜೀಗಿಬೆಟ್ಟು ನಿವಾಸಿ ರವಿ (28) ಎಂಬಾತನೇ ಬಂಧಿತ ಆರೋಪಿ. ಈತ ತನ್ನ ಮನೆಯ ಸಮೀಪದ ಅಪ್ರಾಪ್ತ ಬಾಲಕಿಯೋರ್ವಳನ್ನು ಪುಸಲಾಯಿಸಿ ಬಳಿಕ ಈ ಬಾಲಕಿಯನ್ನು ಮನೆಯಿಂದ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದನೆಂದು ಆರೋಪಿಸಲಾಗಿತ್ತು. ಬಾಲಕಿ ಮನೆಯಿಂದ ಕಣ್ಮರೆಯಾದ ಬೆನ್ನಲ್ಲೇ ಆಕೆ ಫೋಷಕರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಅಪಹರಣ (ಕಿಡ್ನಾಪ್) ದೂರು ದಾಖಲಿಸಿದ್ದರು.

ದೂರಿನನ್ವಯ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ರವಿ ಎಂಬತನನ್ನು ಸಾಗರದಲ್ಲಿ ಬಂಧಿಸಿದ್ದು ಸದ್ಯ ಆರೋಪಿ ವಿರುದ್ಧ ಅತ್ಯಾಚಾರ, ಅಪಹರಣ ದೂರು ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬುಧವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Write A Comment