ಮಂಗಳೂರು,ಜುಲೈ.29 : ಮಂಗಳೂರು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎ.ಪಿ.ಜೆ.ಅಬ್ದುಲ್ ಕಲಾಂರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಉಪಾಸಭಾಪತಿ ಯೋಗಿಶ್ ಭಟ್‌ರವರು ಅಬ್ದುಲ್ ಕಲಾಂರ ಆದರ್ಶ, ಸಾಧನೆಯ ಬಗ್ಗೆ ವಿವರಿಸಿದರು.
ಈ ಸಭೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರವಿಶಂಕರ್ ಮಿಜಾರ್, ವೇದವ್ಯಾಸ ಕಾಮತ್, ಕಾತ್ಯಾಯಿನಿ ಮ.ನ.ಪಾ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ರೂಪಾ ಡಿ.ಬಂಗೇರಾ, ಸುರೇಂದ್ರ, ಜಯಂತಿ ಆಚಾರ್, ಪ್ರೇಮಾನಂದ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
