ಮಂಗಳೂರು, ಆ. 14 : ಈ ವರ್ಷ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳ ಪ್ರಥಮ ವಿಮಾನವು ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಿಂದ (ಭಾರತದಿಂದ ಪ್ರಥಮ ವಿಮಾನ) ನೇರವಾಗಿ ಮದೀನಾಕ್ಕೆ ಆಗಸ್ಟ್ 16ರಂದು ಸಂಜೆ 4 ಗಂಟೆಗೆ ಪ್ರಯಾಣ ಬೆಳೆಸಲಿದೆ ಎಂದು ಮಂಗಳೂರು ಹಜ್ ನಿರ್ವಹಣಾ ಸಮಿತಿ ತಿಳಿಸಿದೆ.
ಪ್ರಥಮ ಯಾನದಲ್ಲಿ 134 ಹಜ್ ಯಾತ್ರಾರ್ಥಿಗಳು ನ್ಯಾಶ್ ವಿಮಾನದ ಮೂಲಕ ತೆರಳಲಿದ್ದಾರೆ. ಹಜ್ ಯಾತ್ರಾರ್ಥಿಗಳ ಹೆಸರು ನೋಂದಣಿ ಪ್ರಕ್ರಿಯೆಯು ಆಗಸ್ಟ್ 14ರಂದು ಬೆಳಗ್ಗೆ 10 ಗಂಟೆಗೆ ಬಜ್ಪೆ ಹಳೆ ವಿಮಾನ ನಿಲ್ದಾಣದಲ್ಲಿ ಪ್ರಾರಂಭವಾಗಲಿದೆ. ಯಾತ್ರೆಯ ಉದ್ಘಾಟನಾ ಸಮಾರಂಭ ಆ.16ರಂದು ಬೆಳಗ್ಗೆ 10ಕ್ಕೆ ಬಜ್ಪೆ ಹಳೆ ವಿಮಾಣ ನಿಲ್ದಾಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಚಿವರಾದ ಬಿ. ರಮಾನಾಥ ರೈ, ಯು.ಟಿ.ಖಾದರ್, ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಐವನ್‌ಡಿಸೋಜ, ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಯೆನೆಪೊಯ ಮುಹಮ್ಮದ್ ಕುಂಞಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
