ಮಂಗಳೂರು,ಆಗಸ್ಟ್.14: ಯಕ್ಷಲಹರಿ ಕಿನ್ನಿಗೋಳಿ ಇದರ ರಜತ ಮಹೋತ್ಸವದ ಅಂಗವಾಗಿ ಜರಗಿದ ‘ಯಕ್ಷಗಾನ ತಾಳಮದ್ದಳೆ ದಶಾಹ ‘ದಲ್ಲಿ ಯಕ್ಷಗಾನ ಅರ್ಥಧಾರಿ, ಲೇಖಕ ಮತ್ತು ಸಂಘಟಕ ಭಾಸ್ಕರ ರೈ ಕುಕ್ಕುವಳ್ಳಿ ಅವರನ್ನು ಬಹುಮುಖೀ ಸಾಧನೆಗಾಗಿ ಸನ್ಮಾನಿಸಲಾಯಿತು.
ಕಟೀಲು ಕ್ಷೇತ್ರದ ಅರ್ಚಕರಾದ ವೇದ ಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ , ಕೆ ವಾಸುದೇವ ಆಸ್ರಣ್ಣ, ಯುಗ ಪುರುಷದ ಅಧ್ಯಕ್ಷ ಭುವನಾಭಿರಾಮ ಉಡುಪ ಮತ್ತು ಯಕ್ಷಲಹರಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.