ಕಾಸರಗೋಡು, ಆ. 20 : ಓಣಂ ಹಬ್ಬದ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಮದ್ಯಮಾರಾಟ ಅಂಗಡಿಗಳಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸಲಾಯಿತು. ಮೆರವಣಿಗೆಯ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಮದ್ಯಮಾರಾಟ ಅಂಗಡಿ ಬಾಗಿಲುಗಳನ್ನು ಮುಚ್ಚಿಸಲು ಒತ್ತಾಯಿಸಿದರಲ್ಲದೆ, ಕೆಲಕಾಲ ಧರಣಿ ನಡೆಸಿದರು.
ಓಣಂ ಹಬ್ಬದ ಹಿನ್ನೆಲೆಯಲ್ಲಿ ಆ. 28 ರ ತನಕ ಮದ್ಯ ಮಾರಾಟ ನಿಷೇಧ ಜಾರಿಗೆ ತರುವಂತೆ ಈ ಸಂದರ್ಭ ಆಗ್ರಹಿಸಲಾಯಿತು. ಯುವಮೋರ್ಚಾ ಜಿಲ್ಲಾಧ್ಯಕ್ಷ ಸುನಿಲ್, ಮುಖಂಡರಾದ ಧನಂಜಯ ಮತ್ತಿತರರು ಈ ಸಂದರ್ಭದಲ್ಲಿದ್ದರು.