ಮಂಗಳೂರು, ಆ.21: ಆರ್ಥಿಕ ಮುಗ್ಗಟ್ಟಿನಿಂದ ಯುವಕ-ಯುವತಿ ಯರು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ವಿಶ್ವ ಕೊಂಕಣಿ ಕೇಂದ್ರ ವಿದ್ಯಾರ್ಥಿ ವೇತನನಿಧಿ ಸ್ಥಾಪಿಸಲಾಗಿದೆ. ವಿದ್ಯಾರ್ಥಿ ವೇತನ ವಿತರಣೆ ಮೂಲಕ ಆರ್ಥಿಕ ಬೆಂಬಲ ನೀಡುವ ಜೊತೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರದೊಂದಿಗೆ ಭಾವನಾತ್ಮಕ ಬೆಸುಗೆ ಸಾಧ್ಯವಾಗಿದೆ ಎಂದು ಮಣಿಪಾಲ ಗ್ಲೋಬಲ್ ಅಕಾಡಮಿ ಅಧ್ಯಕ್ಷ ಟಿ.ವಿ.ಮೋಹನದಾಸ್ ಪೈ ಹೇಳಿದರು.
ನಗರದ ಟಿಎಂಎ ಪೈ ಕನ್ವೆನ್ಶನ್ ಸಭಾಂಗಣದಲ್ಲಿ ಆಯೋಜಿಸಲಾದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಖಾರ್ವಿ, ಕುಡುಬಿ ಮುಂತಾದ ಸಮುದಾಯದವರು ವಿದ್ಯಾರ್ಥಿ ವೇತನದಿಂದ ಶಿಕ್ಷಣ ಪಡೆದು ಉತ್ತಮ ಸ್ಥಾನಮಾನ ಗಳಿಸಲು ಸಾಧ್ಯವಾಗಿದೆ ಎಂದರು.
ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ಇಂಡೋಕೊ ರೆಮಿಡೀಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ವಿ.ಬಂಬ್ಳೂಕರ್, ಭಟ್ಕಳ ಅಂಜುಮನ್ ಸಮೂಹ ಸಂಸ್ಥೆಗಳ ಮೆಂಟರ್ ಎಸ್.ಎಂ.ಸೈಯದ್ ಖಲೀಲುರ್ರಹ್ಮಾನ್, ಹೈದ್ರಾಬಾದ್‌ನ ಉದ್ಯಮಿ ಪ್ರಕಾಶ್ ಪೈ ಮುಖ್ಯ ಅತಿಥಿಗಳಾಗಿದ್ದರು.
ವಿಶ್ವ ಕೊಂಕಣಿ ವಿದ್ಯಾರ್ಥಿ ವೇತನ ನಿಧಿಯ ಅಧ್ಯಕ್ಷ ರಾಮದಾಸ್ ಕಾಮತ್ ಯು., ಕಾರ್ಯದರ್ಶಿ ಪ್ರದೀಪ್ ಜಿ.ಪೈ, ಸಂದೀಪ್ ಶೆಣೈ ಉಪಸ್ಥಿತರಿದ್ದರು. ಸ್ಮಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.