ಕನ್ನಡ ವಾರ್ತೆಗಳು

ದೇವರಾಜ ಅರಸು 100ನೆ ಜನ್ಮ ದಿನಾಚರಣೆ.

Pinterest LinkedIn Tumblr

Zp_prgm_photo_2

ಮಂಗಳೂರು, ಆಗಸ್ಟ್.21:  ಜೀತ ಪದ್ಧತಿ ನಿರ್ಮೂಲನೆ, ಋಣ ಪರಿಹಾರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಸ್ವಾಭಿಮಾನದ ಬದುಕು ನೀಡಿದ ಡಿ. ದೇವರಾಜ ಅರಸು ಅವರನ್ನು ಸಮಾಜ ಎಂದಿಗೂ ಮರೆಯಬಾರದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಅವರು ಗುರುವಾರ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ದಿವಂಗತ ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

Zp_prgm_photo_1Zp_prgm_photo_12 Zp_prgm_photo_5 Zp_prgm_photo_10

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ದೇಶದಲ್ಲಿ ಜಾರಿಗೊಳಿಸಿದ 20 ಅಂಶಗಳ ಆರ್ಥಿಕ ಕಾರ್ಯಕ್ರಮವನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿದ ಜಿಲ್ಲೆ ದಕ್ಷಿಣ ಕನ್ನಡ. ಅದಕ್ಕೆ ಮೂಲ ಕಾರಣಕರ್ತರಾದವರು ದೇವರಾಜ ಅರಸು. ಅವರು ಮಾಡಿರುವ ಹಲವಾರು ಜನಪರ ಯೋಜನೆಗಳ ನೆರವು ಪಡೆದವರು ಸಾಮಾಜಿಕ ನ್ಯಾಯದಿಂದ ವಂಚಿತರಾದವರು. ಆದರೆ ಆ ಸಮುದಾಯವೇ ಅಂತಹ ನಾಯಕರನ್ನು ಮೆರೆದಿರುವುದು ವಿಷಾದನೀಯ ಎಂದವರು ನುಡಿದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಅತಿ ಹೆಚ್ಚು ಅಂಕ ಮತ್ತು ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

 Zp_prgm_photo_3 Zp_prgm_photo_4 Zp_prgm_photo_6

ವಾರ್ತಾಇಲಾಖೆ ಹೊರತಂದಿರುವ ದೇವರಾಜ ಅರಸು ಕುರಿತ ಕಿರುಹೊತ್ತಿಗೆಯನ್ನು ಇದೇ ಸಂದರ್ಭ ಬಿಡುಗಡೆಗೊಳಿಸಲಾಯಿತು. ಶಾಸಕ ಜೆ.ಆರ್.ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ದ.ಕ. ಜಿಪಂ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಮೀನಾಕ್ಷಿ ಮಂಜುನಾಥ, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಮುಹಮ್ಮದ್ ಹನೀಫ್, ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಜಿಪಂ ಸಿಇಒ ಶ್ರೀವಿದ್ಯಾ, ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಮತ್ತಿತರರು ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಸಂತೋಷ್‌ಕುಮಾರ್ ಸ್ವಾಗತಿಸಿದರು. ರೋಹಿತ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

Write A Comment