ಮಂಗಳೂರು : ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷರಾದ ಚಂದ್ರಶೇಖರ್ ಉಚ್ಚಿಲ್‌ರವರ ಮನೆಗೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆಯನ್ನು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದ್ದು, ತಕ್ಷಣ ಎಲ್ಲಾ ಆರೋಪಿಗಳನ್ನು ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರತಾಪಸಿಂಹ ನಾಯಕ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿರುತ್ತಾರೆ.
ಕಳೆದ ಕೆಲವಾರು ತಿಂಗಳುಗಳಿಂದ ಉಳ್ಳಾಲ ಆಸುಪಾಸುಗಳಲ್ಲಿ ನಿರಂತರ ಅಹಿತಕರ ಘಟನೆಗಳು ನಡೆಯುತ್ತಿದ್ದು, ಇದೀಗ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ಇವರ ಮನೆಗೆ ನುಗ್ಗುವ ವಿಫಲ ಪ್ರಯತ್ನ ನಡೆದಿರುವುದನ್ನು ಬಿಜೆಪಿ ಜಿಲ್ಲಾ ಘಟಕ ಖಂಡಿಸಿದೆ.
ಘಟನೆಗಳು ಮರುಕಳಿಸದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಉಳ್ಳಾಲದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಜಿಲ್ಲಾ ವಕ್ತಾರ ಮಾಜಿ ಶಾಸಕ ಜಯರಾಮ್ ಶೆಟ್ಟಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.