ಕನ್ನಡ ವಾರ್ತೆಗಳು

ಆರ್ ಒ ಪಿ ಯೋಜನೆಯನ್ವಯ ನಿವೃತ್ತ ಸೈನಿಕರಿಗೆ ಪಿಂಚಣಿ ಯೋಜನೆ ಜಾರಿಗೆ

Pinterest LinkedIn Tumblr

manohar_parinakar_poc

ಹೊಸದಿಲ್ಲಿ: ‘ಸಮಾನ ಶ್ರೇಣಿ, ಸಮಾನ ಪಿಂಚಣಿ’ ಯೋಜನೆಯನ್ನು ಕೊನೆಗೂ ಕೇಂದ್ರ ಸರಕಾರ ಜಾರಿಗೊಳಿಸಲಾಗಿದೆ.

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ನಿವೃತ್ತ ಯೋಧರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಇಂದಿನಿಂದ ಆರ್ ಒ ಪಿ ಯೋಜನೆಯನ್ನು ಜಾರಿಗೊಳಿಸುತ್ತಿರುವುದಾಗಿ ತಿಳಿಸಿದರು. ಅಲ್ಲದೆ ಈ ಯೋಜನೆ ಜಾರಿಯಿಂದ 8 ರಿಂದ 10 ಸಾವಿರ ಕೋಟಿ ರುಪಾಯಿ ಖರ್ಚಾಗಲಿದೆ ಎಂದರು.

ಆರ್ ಒ ಪಿ ಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬದ್ಧತೆ ತೋರಿದ್ದು, ನಾವು ನಮ್ಮ ಭರವಸೆಯನ್ನು ಈಡೇರಿಸಿದ್ದೇವೆ ಎಂದು ರಕ್ಷಣಾ ಸಚಿವರು ತಿಳಿಸಿದರು. 2014, ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಯೋಜನೆ ಜಾರಿಯಾಗಿದ್ದು, ಪ್ರತಿ ಐದು ವರ್ಷಕೊಮ್ಮೆ ಪಿಂಚಣಿ ಪರಿಷ್ಕರಣೆ ಮಾಡುವುದಾಗಿ ರಕ್ಷಣಾ ಸಚಿವರು ಹೇಳಿದ್ದಾರೆ.

Write A Comment