ಕನ್ನಡ ವಾರ್ತೆಗಳು

ಕಾಂಗ್ರೆಸ್ ಮುಖಂಡ ದಿ.ಮುಹಮ್ಮದ್ ಬದ್ರುದ್ದೀನ್‌ರ ಮನೆಗೆ ಗೃಹ ಸಚಿವ ಕೆ ಜೆ ಜಾರ್ಜ್ ಭೇಟಿ

Pinterest LinkedIn Tumblr

badrudin_kgerogr_bheti

ಮಂಗಳೂರು,ಸೆ.08: ಹೃದಯಾಘಾತದಿಂದ ನಿಧನರಾದ ಜಿಲ್ಲೆಯ ಹಿರಿಯ ಕಾಂಗ್ರೆಸ್ ಧುರೀಣ, ಕೆಪಿಸಿಸಿ ಕಾರ್ಯದರ್ಶಿ ಮುಹಮ್ಮದ್ ಬದ್ರುದ್ದೀನ್ ಅವರ ಮನೆಗೆ ರಾಜ್ಯ ಗೃಹ ಸಚಿವ ಕೆ ಜೆ ಜಾರ್ಜ್ ಸೋಮವಾರ ಮಧ್ಯಾಹ್ನ ಭೇಟಿ ನೀಡಿದರು.

ಕೆಪಿಸಿಸಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಬದ್ರುದ್ದೀನ್ ಉತ್ತಮ ನಾಯಕನಾಗಿ ತನ್ನ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಬಹಳ ಪ್ರಮುಖ ಪಾತ್ರವಹಿಸಿದ್ದು, ಅವರ ಈ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಲ್ಲದೆ ತಡೆಯಲಾರದ ದುಃಖಕ್ಕೂ ಕಾರಣವಾಗಿದೆ ಎಂದು ಕೆ.ಜೆ ಜಾರ್ಜ್ ವಿಷಾದ ವ್ಯಕ್ತ ಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ ರಮನಾಥ ರೈ, ಮಂಗಳೂರು ಶಾಸಕ ಜೆ ಆರ್ ಲೋಬೋ, ಬುಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಜಿ ಪಂ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಎಂ ಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಿ ಎಂ ಅಬ್ಬಾಸ್ ಅಲಿ ಮೊದಲಾದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Write A Comment