ಕನ್ನಡ ವಾರ್ತೆಗಳು

ಲೋಡ್ ಶೆಡ್ಡಿಂಗ್ ಮಾಹಿತಿ ಸಾರ್ವಜನಿಕರಿಗೆ ನೀಡಿ : ಆಶಾ ತಿಮ್ಮಪ್ಪ ಗೌಡ

Pinterest LinkedIn Tumblr

Zp_news_photo_2

ಮಂಗಳೂರು,ಸೆ.12: ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಉತ್ಪಾದನೆಯಲ್ಲಿ ಏರಿಳಿತವಾಗಿರುವ ಸಂಗತಿ ಎಲ್ಲರಿಗೂ ತಿಳಿದ ವಿಷಯವೇ . ಆದರೆ ದ.ಕ. ಜಿಲ್ಲೆಯಲಿ ಮೆಸ್ಕಾಂನವರು ಲೋಡ್ ಶೆಡ್ಡಿಂಗನ್ನು ತಮ್ಮ ಇಷ್ಟದಂತೆ ಅನಿಯಮಿತವಾಗಿ ಮಾಡುತ್ತಿರುವ ಕಾರಣ ಲೋಡ್ ಶೆಡ್ಡಿಂಗ್ ಬಗ್ಗೆ ನಿಖರವಾದ ನಿರ್ದಿಷ್ಠವಾದ ಮಾಹಿತಿಯನ್ನುಸಾರ್ವಜನಿಕರಿಗೆ ನೀಡುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಆಶಾ ತಿಮ್ಮಪ್ಪ ಗೌಡ ರವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರ್ನಾಟಕ  ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಹಾಜರಿದ್ದ ಉಪಾಧ್ಯಕ್ಷ ಶ್ರೀ ಸತೀಶ್ ಕುಂಪಲ ಇವರು ಮಾತನಾಡಿ ಗ್ರಾಮಾಂತರ ಪ್ರದೇಶ ಮತ್ತು ಪಟ್ಟಣ / ನಗರ ಪ್ರದೇಶಗಳಲ್ಲಿ ಪ್ರತಿನಿತ್ಯ ಎಷ್ಟುಗಂಟೆಗಳ ಅವಧಿಗೆ ಲೋಡ್ ಶೆಡ್ಡಿಂಗ್ ಮಾಡುತ್ತೀರಿ ಎಂಬ ಮಾಹಿತಿಯನ್ನು ನೀಡುವಂತೆ ತಿಳಿಸಿ ವಿದ್ಯುತ್ ಕಡಿತದಿಂದ ಕುಡಿಯುವ ನೀರು / ಕೃಷಿಗೆ ಎಲ್ಲಕ್ಕೂ ತೊಂದರೆಯಾಗುತ್ತಿದೆ ಎಂದರು. ಮೆಸ್ಕಾಂ ಅಧಿಕಾರಿಗಳು ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿನಿತ್ಯ 5-6 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ.

ಅಂತೆಯೇ ನಗರ ಪ್ರದೇಶದಲ್ಲಿ ಬೆಳಗ್ಗೆ 2 ಮತ್ತು ರಾತ್ರಿ 2 ಗಂಟೆ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ, ಶ್ರೀಮತಿ ಚಂದ್ರಕಲ,ಶ್ರೀ ಬಾಲಕೃಷ್ಣ ಸುವರ್ಣ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಪಿ.ಐ ಶ್ರೀವಿದ್ಯಾ ಉಪಸ್ಥಿತರಿದ್ದರು.

Write A Comment