ಕನ್ನಡ ವಾರ್ತೆಗಳು

ಸೆ. 15 ರಂದು ಜನಮನ – ಫಲಾನುಭವಿಗಳೊಂದಿಗೆ ಉಸ್ತುವಾರಿ ಸಚಿವರ ಸಂವಾದ

Pinterest LinkedIn Tumblr

Rai_janamana_sanvaada

ಮಂಗಳೂರು, ಸೆ.12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೊಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಮನಸ್ವಿನಿ, ಬಿದಾಯಿ, ಕ್ಷೀರಧಾರೆ, ಋಣಮುಕ್ತ ಮತ್ತಿತರ ಯೋಜನೆಗಳ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಸಂವಾದ ನಡೆಸುವ ಜನಮನ ಕಾರ್ಯಕ್ರಮವು ಸೆಪ್ಟಂಬರ್ 15 ರಂದು ಮಂಗಳೂರಿನಲ್ಲಿ ನಡೆಯಲಿದೆ.

ನಗರದ ಮಿಲಾಗ್ರಿಸ್ ಹಾಲ್‌ನಲ್ಲಿ ಸೆ.15 ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ನೇರವಾಗಿ ಮತ್ತು ಮುಕ್ತವಾಗಿ ಹಂಚಿಕೊಳ್ಳಲಿದ್ದಾರೆ. ರಾಜ್ಯ ಸರಕಾರದ 12 ಪ್ರಮುಖ ಯೋಜನೆಗಳ ಫಲಾನುಭವಿಗಳು ಸಂವಾದದಲ್ಲಿ ಪಾಲ್ಗೊಳ್ಳುವರು.

ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಯೋಜನೆಗಳ ಸಾಧಕ ಬಾಧಕಗಳ ಬಗ್ಗೆ ಹಾಗೂ ಅವುಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿ ಸುವ ನಿಟ್ಟಿನಲ್ಲಿ ಫಲಾನುಭವಿಗಳೊಂದಿಗೆ ಒಂದೇ ವೇದಿಕೆಯಲ್ಲಿ ಸಂವಾದ ನಡೆಸುವರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಇಲಾಖೆಗಳು ಜನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಾರ್ತಾ ಇಲಾಖೆಯು ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್, ಯುಜನ ಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್, ಜಿಲ್ಲೆಯ ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದು, ಶಾಸಕ ಜೆ.ಆರ್. ಲೋಬೋ ಅಧ್ಯಕ್ಷತೆ ವಹಿಸಲಿದ್ದಾರೆ.

Write A Comment