D.B.Mehta
ಮಂಗಳೂರು, ಅ.4 : ನಗರದ ರಿಯಲ್ ಎಸ್ಟೇಟ್ ಉದ್ಯಮಿಯೋರ್ವರಿಗೆ ಭೂಗತ ಪಾತಕಿ ರವಿ ಪೂಜಾರಿಯಿಂದ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಮಂಗಳೂರಿನ ಕ್ರೈಡೈ ಅಧ್ಯಕ್ಷ ಡಿ.ಬಿ. ಮೆಹ್ತಾ ಅವರು ನಗರದ ಲೈಟ್ ಹೌಸ್ ಹಿಲ್ ರಸ್ತೆಯಲ್ಲಿರುವ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಚೇರಿಯನ್ನು ಹೊಂದಿದ್ದಾರೆ. ಅ. 1ರಂದು ಮಧ್ಯಾಹ್ನ 1ರಿಂದ 1.10ರ ನಡುವೆ ರವಿ ಪೂಜಾರಿ ಎಂದು ಹೇಳಿಕೊಂಡ ವ್ಯಕ್ತಿ ಮೆಹ್ತಾ, ಅವರ ಪತ್ನಿ, ಕೆಲಸದವರು ಮತ್ತು ಇಂಜಿನಿಯರ್ ಸುರೇಶ್ ಗೆ ಬೆದರಿಕೆ ಕರೆಗಳನ್ನು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಬಂದರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
