ಕನ್ನಡ ವಾರ್ತೆಗಳು

ಮನಪಾ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಧರಣಿ.

Pinterest LinkedIn Tumblr

Bjp_mcc_protest_1

ಮಂಗಳೂರು, ಅ.07  : ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ವೈಫಲ್ಯವನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಮಂಗಳವಾರ ಮನಪಾ ಕಚೇರಿ ಎದುರು ಧರಣಿ ನಡೆಯಿತು.

ಮನಪಾ ವಿಪಕ್ಷ ನಾಯಕ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಪಾಲಿಕೆಯಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಆಸ್ತಿ ತೆರಿಗೆಯನ್ನು ಶೇ.15ರಷ್ಟು ಏರಿಸಿ ಮಂಗಳೂರಿನ ಜನತೆಗೆ ಮೋಸ ಮಾಡಿದೆ ಎಂದು ಆಪಾದಿಸಿದರು.

Bjp_mcc_protest_2 Bjp_mcc_protest_3

ಪಾಲಿಕೆ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ತಿಲಕ್‌ಚಂದ್ರ, ರೂಪಾ ಡಿ. ಬಂಗೇರ, ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ರವಿಶಂಕರ್ ಮಿಜಾರ್, ಪ್ರಧಾನ ಕಾರ್ಯದರ್ಶಿ ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಭರತ್ ಶೆಟ್ಟಿ, ಸುರೇಶ್ಚಂದ್ರ ಶೆಟ್ಟಿ, ಉತ್ತರ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅಶೋಕ್, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ ಮೊದಲಾದವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು

Write A Comment