ಕನ್ನಡ ವಾರ್ತೆಗಳು

ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪ್ರಶಾಂತ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

Pinterest LinkedIn Tumblr

joshi_visit_prshnthouse_1

ಮೂಡಬಿದಿರೆ,ಅ.15: ಮೂಡಬಿದ್ರೆಯಲ್ಲಿ ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಭಜರಂಗದಳದ ಕಾರ್ಯಕರ್ತ ಹೂವಿನ ವ್ಯಾಪಾರಿ ಪ್ರಶಾಂತ್ ಪೂಜಾರಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಷಿ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಅವರು ಪ್ರಶಾಂತ್‌‌ ಕೊಲೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸುವುದಾಗಿ ಕುಟುಂಬದವರಿಗೆ ಭರವಸೆ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್‌ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಮತ್ತಿತರರು ಈ ಸಂದರ್ಭದಲ್ಲಿ ಜೊತೆಗಿದ್ದರು.

joshi_visit_prshnthouse_2

ಭಜರಂಗದಳದ ಕಾರ್ಯಕರ್ತನಾಗಿದ್ದ ಪ್ರಶಾಂತ್ ಪೂಜಾರಿಯನ್ನು ಅ.11ರಂದು ಮೂಡಬಿದ್ರೆ ಸಮೀಪದ ಸಮಾಜ ಮಂದಿರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿದ್ದರು. ಮೂರು ಬೈಕ್‌ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದರು. ಈ ವೇಳೆ ಮೃತ ಪ್ರಶಾಂತ್‌ ತಂದೆಯೂ ಗಾಯಗೊಂಡಿದ್ದರು. ಪ್ರಶಾಂತ್ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಇದುವರೆಗೆ ಪೊಲೀಸ್ ಇಲಾಖೆ ವಿಫಲವಾಗಿದೆ. ಹಿಂದೂ ಸಂಘಟನೆಗಳು ಈಗಾಗಲೇ ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಗಡು ನೀಡಿರುವುದನ್ನು ಇಲ್ಲಿ ಸ್ಮರಿಸ ಬಹುದು.

Write A Comment