ಕನ್ನಡ ವಾರ್ತೆಗಳು

ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಹಲ್ಲೆ : ಆರೋಪಿಗಳು ಪರಾರಿ

Pinterest LinkedIn Tumblr

ಮಂಗಳೂರು, ಅ.29: ನಗರದ ವೆನ್‌ಲಾಕ್ ಆಸ್ಪತ್ರೆ ಸಮೀಪದ ರೈಲ್ವೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ನಾಲ್ವರು ಅಪರಿಚಿತರು ಮಾರಕಾಯುಧಗಳಿಂದ ಹಲ್ಲೆಗೈದ ಘಟನೆ ಬುಧವಾರ ರಾತ್ರಿ ನಡೆದಿದೆ.

ಹಲ್ಲೆಗೊಳಗಾದವರನ್ನು ಮೂಡುಬಿದಿರೆ ಕೋಟೆಬಾಗಿಲಿನ ನಿವಾಸಿ ಇಸ್ಮಾಯೀಲ್ (34) ಎಂದು ಗುರುತಿಸಲಾಗಿದೆ. ಎರಡು ಬೈಕ್‌ಗಳಲ್ಲಿ ಆಗಮಿಸಿದ ನಾಲ್ವರು ಅಪರಿಚಿತರು ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಇಸ್ಮಾಯೀಲ್ ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಇಸ್ಮಾಯೀಲ್ ತನ್ನ ಸಹೋದರ ಹಸನಬ್ಬ ಎಂಬವರೊಂದಿಗೆ ಕೇರಳದಿಂದ ರೈಲು ಮೂಲಕ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಇಳಿದು ಮೂಡುಬಿದಿರೆಗೆ ಹೋಗಲು ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರೆನ್ನಲಾಗಿದೆ. ಈ ಸಂದರ್ಭ ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment