ಮ೦ಗಳೂರು ನ.05: ದ.ಕ.ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ 44 ಪ್ರಕರಣಗಳು ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿವೆ ಅವುಗಳನ್ನು ಆದ್ಯತೆಯ ಮೇಲೆ ಇತ್ಯರ್ಥಪಡಿಸಬೇಕೆಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಶ್ರೀಮತಿ ಮಧುಶರ್ಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಇಂದು ದ.ಕ.ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಪ್ರಗತಿ ಪರಿಶೀಲನೆ ನಡಡೆಸಿ ಮಾತನಾಡಿದರು.
ಜಿಲ್ಲಾಧಿಕಾರಿಗಳ ಕಛೇರಿಗೆ ಸಂಬಂಧಿಸಿದಂತೆ 12, ಜಿಲ್ಲಾ ಪೋಲೀಸ್ ಅಧಿಕ್ಷಕರ ಕಛೇರಿಗೆ ಸಂಬಂದಿಸಿದ 10 ಮತ್ತು ಇತರೆ ಇಲಾಖೆಗಳ 22 ಮೊಕದ್ದಮೆಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಐ.ಶ್ರೀವಿದ್ಯ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಙಾನ ಇಲಾಖೆ ಅಧಿಕಾರಿಗಳು, ಮಂಗಳೂರು ಮ,ಹಾನಗರ ಪಾಲಿಕೆ ಉಪಾಯುಕ್ತ ಗೋಪಾಲದಾಸ ನಾಯಕ್ ಮೊದಲಾದವರು ಉಪಸ್ಥಿತರಿದ್ದರು
