ಕನ್ನಡ ವಾರ್ತೆಗಳು

ಉಡುಪಿಯಲ್ಲಿ ನೆಹರು ಅಪೂರ್ವ ಛಾಯಾಚಿತ್ರ ಪ್ರದರ್ಶನ

Pinterest LinkedIn Tumblr

ಉಡುಪಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಬದುಕಿನ ಅಪೂರ್ವ ಹಾಗೂ ಪ್ರಮುಖ ಜೀವನ ಕ್ಷಣಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಏರ್ಪಡಿಸಿರುವ ಅಪೂರ್ವ ಛಾಯಾಚಿತ್ರ ಪ್ರದರ್ಶನವನ್ನು ಶಾಸಕ ಪ್ರಮೋದ್ ಮಧ್ವರಾಜ್ ಇಂದು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ನೆಹರು ಕುರಿತ ಮಡಿಕೆ ಪತ್ರಗಳನ್ನು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಬಿಡುಗಡೆಗೊಳಿಸಿದರು.

Neharu_photo_ exhibition (1) Neharu_photo_ exhibition (2)

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜನಾರ್ಧನ ತೋನ್ಸೆ, ತಾಲೂಕು ಪಂಚಾಯತ್ ಅಧ್ಯಕ್ಷೆ ಸುನೀತಾ ನಾಯಕ್, ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್, ವಿದ್ಯಾಂಗ ಇಲಾಖೆಯ ಉಪ ನಿರ್ದೇಶಕ ದಿವಾಕರ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ.ಕೆ ಸ್ವಾಗತಿಸಿದರು. ಪೌರಾಯುಕ್ತ ಮಂಜುನಾಥಯ್ಯ ನಿರೂಪಿಸಿದರು.
ಇಂದಿನಿಂದ ನವೆಂಬರ್ ೧೦ ರವರೆಗೆ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರಿಗೆ ಮುಕ್ತ ಅವಕಾಶ ಇದೆ.

ನೆಹರು ಪ್ರದರ್ಶನ- ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯಕುಮಾರ್ ಸೊರಕೆ ಅವರು ಬೋರ್ಡ್ ಹೈಸ್ಕೂಲ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾದ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಮಕ್ಕಳ ಚಲನಚಿತ್ರೋತ್ಸವ ಆಯೋಜನೆ ಸಮಿತಿಯೊಂದಿಗೆ ಮಾತುಕತೆ ನಡೆಸಿದರು.

Write A Comment