ಕನ್ನಡ ವಾರ್ತೆಗಳು

ಟಿಪ್ಪು ಸುಲ್ತಾನ್ ಜನ್ಮದಿನಾಚರಣೆಗೆ ವಿರೋಧ : ಬ್ಯಾನರ್, ಪೋಸ್ಟರ್ ಗಳಿಗೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಹಾನಿ

Pinterest LinkedIn Tumblr

Tippu_banner_damage_1

ಮಂಗಳೂರು : ರಾಜ್ಯ ಸರಕಾರ ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ ನಡೆಸಲು ತೀರ್ಮಾನಿಸುವ ಹಿನ್ನೆಲೆಯಲ್ಲಿ ಮಂಗಳೂರಿನ ಪಂಪ್‌ವೆಲ್‌‍ನಲ್ಲಿ ಬಳಿ ಹಾಕಲಾಗಿದ್ದ ಬ್ಯಾನರ್, ಪೋಸ್ಟರ್ ಗಳಿಗೆ ಯಾರೋ ಕಿಡಿಗೇಡಿಗಳು ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಹಾನಿ ಎಸಗಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ.

ಸೋಮವಾರ ತಡ ರಾತ್ರಿ ಮಂಗಳೂರಿನ ಪಂಪ್ ವೆಲ್ ನಲ್ಲಿರುವ ಮಹಾವೀರ ವೃತ್ತದ ಬಳಿ ಟಿಪ್ಪು ಜನ್ಮದಿನಾಚರಣೆಯ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್ ಹಾಗೂ ಪೋಸ್ಟರ್ ಗಳಿಗೆ ಕಪ್ಪು ಬಣ್ಣ ಹಾಗೂ ಚಪ್ಪಲಿ ಹಾರ ಹಾಕುವ ಮೂಲಕ ಕೆಲವರು ಟಿಪ್ಪು ಸುಲ್ತಾನ್ ಜನ್ಮದಿನಾಚರಣೆಗೆ ವಿರೋಧ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಪ್ರಕರಣ ಇಂದು ಮುಂಜಾನೆ ಬೆಳಕಿಗೆ ಬಂದಿದೆ.

Tippu_banner_damage_1 Tipu_jayanthi_pro11 Tipu_jayanthi_pro12 Tipu_jayanthi_pro14 Tipu_jayanthi_pro15 Tipu_jayanthi_pro16 Tipu_jayanthi_pro13

ನವಂಬರ್ ೧೦ರಂದು (ಇಂದು) ರಾಜ್ಯ ಸರಕಾರ ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧ ಪಡಿಸಿರುವ ಕೆಲವರು ಪಂಪ್ ವೆಲ್ ನಲ್ಲಿ ಹಾಕಲಾಗಿದ್ದ ಬ್ಯಾನರ್ ಹಾಗೂ ಪೋಸ್ಟರ್ ಗೆ ಹಾನಿ ಎಸಗುವ ಮೂಲಕ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಠಿಸಿದ್ದಾರೆ ಎಂದು ಸಂಘಟಕರು ಆರೋಪಿಸಿದ್ದಾರೆ. ಪೊಲೀಸರು ಸ್ಥಳದಿಂದ ಬ್ಯಾನರ್ ತೆರವುಗೊಳಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Write A Comment