ಕನ್ನಡ ವಾರ್ತೆಗಳು

ನಾಳೆ ಬಂದ್ ಇಲ್ಲ… ಬದಲಾಗಿ ರಾಜ್ಯಾದ್ಯಂತ ರಸ್ತೆ ತಡೆ – ಪ್ರತಿಭಟನೆ

Pinterest LinkedIn Tumblr

Sharan_Shenav_Photo

ಮಂಗಳೂರು: ಮಡಿಕೇರಿಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯದರ್ಶಿ ಕುಟ್ಟಪ್ಪ ಅವರು ಸಾವನ್ನಪ್ಪಿದ ಘಟನೆಯನ್ನು ಖಂಡಿಸಿ ಸಂಘ ಪರಿವಾರ ನೀಡಿದ ನಾಳಿನ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಬದಲಾಗಿ ನಾಳೆ ಬೆಳಗ್ಗೆ 11ರಿಂದ 12 ಗಂಟೆ ತನಕ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೃಹತ್‌ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಟಿಪ್ಪು ಜಯಂತಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕಾರ್ಯದರ್ಶಿ ಕುಟ್ಟಪ್ಪ ಅವರ ಸಾವಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಿಂದೂ ಸಂಘಟನೆಗಳ ಪ್ರಮುಖರು ನ. 11ರಂದು ನಗರದ ಸಂಘ ನಿಕೇತನದಲ್ಲಿ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗ ದಳ ಸಂಘಟನೆಗಳ ಮುಖಂಡರಾದ ಜಗದೀಶ್‌ ಶೇಣವ ಮತ್ತು ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

ಟಿಪ್ಪು ಜಯಂತಿ ಆಚರಣೆ ಮತ್ತು ಅದರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಭವಿಸುತ್ತಿರುವ ಘಟನೆಗಳಿಗೆ ರಾಜ್ಯ ಸರಕಾರವೇ ಕಾರಣ. ವೋಟ್‌ ಬ್ಯಾಂಕ್‌ಗಾಗಿ ಅಲ್ಪ ಸಂಖ್ಯಾಕರ ಓಲೈಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಇಂತಹ ಕಾರಣಕ್ಕಾಗಿ ರಾಜ್ಯದಲ್ಲಿ ಪ್ರಶಾಂತ್‌ ಪೂಜಾರಿ, ಕುಟ್ಟಪ್ಪ ಅವರಂತಹ ವ್ಯಕ್ತಿಗಳ ಹತ್ಯೆಗಳು ಸಂಭವಿಸುತ್ತವೆ. ಆದ್ದರಿಂದ ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶರಣ್‌ ಪಂಪ್‌ವೆಲ್‌ ಒತ್ತಾಯಿಸಿದ್ದಾರೆ.

Write A Comment