ಕನ್ನಡ ವಾರ್ತೆಗಳು

ನಾಳೆ ಬಂದ್ ಕರೆ ಹಿನ್ನೆಲೆ : ಜಿಲ್ಲಾಡಳಿತದಿಂದ ಮುಂಜಾಗರೂತ ಕ್ರಮ – ಮದ್ಯದಂಗಡಿ ಬಂದ್

Pinterest LinkedIn Tumblr

DC_Meet_bund

ಮಂಗಳೂರು: ಜಿಲ್ಲೆಯಲ್ಲಿ ನ. 13ರಂದು ಪ್ರಸ್ತಾವಿತ ಬಂದ್ ವೇಳೆ ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗುವುದು. ಸಾರ್ವಜನಿಕ ಶಾಂತಿ, ನೆಮ್ಮದಿ ಕದಡುವಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಎಚ್ಚರಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ನ. 13ರ ಬಂದ್‌ ಕರೆಯ ವದಂತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನಾ ಉನ್ನತ ಮಟ್ಟದ ಸಭೆಯು ಬುಧವಾರ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ. 13ರಂದು ಯಾವುದೇ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಅವಕಾಶವಿಲ್ಲ. ಈಗಾಗಲೇ ಅನುಮತಿ ನೀಡಿರುವ ಸಮಾರಂಭಗಳ ಅನುಮತಿಯನ್ನು ಹಿಂಪಡೆಯಲಾಗುವುದು. ಅಂದು ಬಾರ್‌ ಮತ್ತು ಮದ್ಯದಂಗಡಿ ಸೇರಿದಂತೆ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗುವುದು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗುವುದು ಎಂದರು.

ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ರಜೆಗೆ ಅವಕಾಶವಿಲ್ಲ. ಈಗಾಗಲೇ ರಜೆಯಲ್ಲಿ ತೆರಳಿರುವ ನೌಕರರಿಗೆ ರಜೆ ರದ್ದುಪಡಿಸಿ, ಕರ್ತವ್ಯಕ್ಕೆ ಕರೆಸಬೇಕು. ಅಗ್ನಿಶಾಮಕ ಹಾಗೂ ಆಂಬ್ಯುಲೆನ್ಸ್ ವಾಹನಗಳನ್ನು ಸನ್ನದ್ಧವಾಗಿರಿಸಬೇಕು ಎಂದು ತಿಳಿಸಿದರು.

ಎಲ್ಲ ಸರಕಾರಿ ವಾಹನಗಳನ್ನೂ ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಅಗ್ನಿಶಾಮಕ ಹಾಗೂ ಆ್ಯಂಬುಲೆನ್ಸ್‌ ವಾಹನಗಳನ್ನು ಸನ್ನದ್ಧವಾಗಿರಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಇಬ್ರಾಹಿಂ, ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್‌ಗಳು ಮುಂಜಾಗರೂಕತಾ ಸಭೆ ಕರೆಯುವಂತೆ ತಿಳಿಸಿದರು.

ಸಭೆಯಲ್ಲಿ ಪೊಲೀಸ್‌ ಆಯುಕ್ತ ಎಸ್‌. ಮುರುಗನ್‌, ಎಸ್‌ಪಿ ಡಾ| ಶರಣಪ್ಪ, ಎಡಿಸಿ ಕುಮಾರ್‌, ಡಿಸಿಪಿ ಶಾಂತರಾಜು, ಮನಪಾ ಆಯುಕ್ತ ಡಾ| ಗೋಪಾಲಕೃಷ್ಣ, ಉಪ ವಿಭಾಗಾಧಿಕಾರಿಗಳಾದ ಡಾ| ಅಶೋಕ್‌, ಸತೀಶ್‌ ಕುಮಾರ್‌ ಮತ್ತಿತ್ತರ ಅಧಿಕಾರಿಗಳು ಪಾಲ್ಗೊಂಡಿದ್ದರು.

Write A Comment