ಕನ್ನಡ ವಾರ್ತೆಗಳು

ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನೆಲೆ : ಸಚಿವ ರಮಾನಾಥ ರೈ ರಾಜೀನಾಮೆಗೆ ಆಗ್ರಹ.

Pinterest LinkedIn Tumblr

nalin_kumar-kateel

ಮಂಗಳೂರು, ನ.14: ಗುರುವಾರ ಬಂಟ್ವಾಳದಲ್ಲಿ ನಡೆದ ಘಟನೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನೇರ ಹೊಣೆಯಾಗಿದ್ದು, ರಮಾನಾಥ ರೈ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಬಂಟ್ವಾಳದಲ್ಲಿ ಚೂರಿ ಇರಿತದಿಂದ ಮೃತಪಟ್ಟ ನಾವೂರು ನಿವಾಸಿ ಹರೀಶ್ ಕುಟುಂಬಕ್ಕೆ ನಗರದ ಎಜೆ ಆಸ್ಪತ್ರೆಯಲ್ಲಿ ಶುಕ್ರವಾರ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬಂಟ್ವಾಳದ ಮಣಿಹಳ್ಳದಲ್ಲಿ ಮೃತಪಟ್ಟ ನಾವೂರು ನಿವಾಸಿ ಹರೀಶ್ ಸಂಘಪರಿವಾರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿರಲಿಲ್ಲ. ಅವರ ಮನೆಯಲ್ಲಿ ಸಾಕಷ್ಟು ಆರ್ಥಿಕ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ಮೃತ ಹರೀಶ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು.

ಬಿಜೆಪಿ ಜನಸಂಕಲ್ಪ ಯಾತ್ರೆ ಮುಂದೂಡಿಕೆ :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ನ.14ರಂದು ದ.ಕ. ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಜನಸಂಕಲ್ಪ ಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅವರು ತಿಳಿಸಿದರು.

Write A Comment