ಕನ್ನಡ ವಾರ್ತೆಗಳು

ಉಳ್ಳಾಲ ಪರಿಸರದಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳು : ಕ್ಷಿಪ್ರ ಕಾರ್ಯಾಚರಣೆ ಪಡೆ ಕಾರ್ಯಾರಂಭ

Pinterest LinkedIn Tumblr

Ullala_Rapid_Force_1

ಮಂಗಳೂರು : ಟಿಪ್ಪು ದಿನಾಚರಣೆ ವಿವಾದದ ಕಿಡಿಯ ಕಿಚ್ಚಿನಿಂದ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶವಾದ ಉಳ್ಳಾಲದಲ್ಲಿ ರವಿವಾರ ಕ್ಷಿಪ್ರ ಕಾರ್ಯಾಚರಣೆ ಪಡೆ (ರ್‍ಯಾಪಿಡ್ ಯಾಕ್ಷನ್ ಫೋರ್ಸ್) ಪಥಸಂಚಲನ ನಡೆಸಿತು.

Ullala_Rapid_Force_2 Ullala_Rapid_Force_3 Ullala_Rapid_Force_4 Ullala_Rapid_Force_5

ಜಿಲ್ಲೆಗೆ ಮತ್ತಷ್ಟು ಪೊಲೀಸ್ ಭದ್ರತೆಯನ್ನು ತರಿಸಲಾಗಿದೆ. ರಾಪಿಡ್ ಆಕ್ಷನ್ ಫೋರ್ಸ್‍ನಿಂದ ರವಿವಾರ ಸಂಜೆ ಉಳ್ಳಾಲದಲ್ಲಿ ಪಥಸಂಚಲನ ನಡೆಸಲಾಗಿದೆ. ಹೊರಜಿಲ್ಲೆಗಳಿಂದಲೂ ಪೊಲೀಸ್ ಪಡೆಗಳನ್ನು ಕರೆಸಲಾಗಿದೆ. ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯೂ ಹಾಗೂ ಅರೆ ಮೀಸಲು ಪಡೆಯೂ ಜಿಲ್ಲೆಗೆ ಆಗಮಿಸಿದೆ. ಮಂಗಳೂರು ನಗರಕ್ಕೆ 10 ಕೆಎಸ್‍ಆರ್‌ಪಿ ಪ್ಲಟೂನ್ ಗಸ್ತನ್ನು ಒದಗಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿ ಹೊತ್ತು ಸಂಚಾರ ಕಡಿಮೆಗೊಳಿಸಲು ಡಿ.ಸಿ ಸಲಹೆ

ಪೊಲೀಸ್ ಇಲಾಖೆಯೊಂದಿಗೆ ಕಂದಾಯ ಇಲಾಖಾಧಿಕಾರಿಗಳೂ ಕಾನೂನು ಸುವ್ಯವಸ್ಥೆ ಮೇಲೆ ನಿಗಾ ಇಟ್ಟಿದ್ದಾರೆ. ಜಿಲ್ಲೆಯ ಇನ್ನಷ್ಟು ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಲು ಪೊಲೀಸ್ ಇಲಾಖೆಗೆ ಅನುದಾನ ಬಿಡುಗಡೆ ಮಾಡಲಾಗುವುದು. ಕಳೆದೆರಡು ದಿನಗಳಲ್ಲಿ ತಾನು ಜಿಲ್ಲೆಯ ವಿವಿಧೆಡೆ ಸಂಚರಿಸಿದ ಸಂದರ್ಭದಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ನಡೆದಾಡುತ್ತಿರುವುದು ಕಂಡುಬಂದಿದೆ. ರಾತ್ರಿ ವೇಳೆಯಲ್ಲಿಯೇ ಅನೇಕ ಅಹಿತಕರ ಘಟನೆಗಳು ನಡೆದಿರುವುದರಿಂದ ಸೂಕ್ಷ್ಮ ಸಂದರ್ಭಗಳಲ್ಲಿ ಕತ್ತಲಾದ ನಂತರ ಸಾರ್ವಜನಿಕರು ಸಾಧ್ಯವಾದಷ್ಟು ಸಂಚಾರ ಕಡಿಮೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಮನವಿ ಮಾಡಿದ್ದಾರೆ

Write A Comment