ಕನ್ನಡ ವಾರ್ತೆಗಳು

ಪಾಣೆಮಂಗಳೂರು ಪೇಟೆಯಲ್ಲಿನ ನೂತನ ಮೀನು ಮಾರುಕಟ್ಟೆ ಉದ್ಘಾಟನೆ

Pinterest LinkedIn Tumblr

bantwl_fish_market

ಬಂಟ್ವಾಳ, ನ.16: ರಾಜ್ಯ ಸರಕಾರ, ಕರಾವಳಿ ಅಭಿವೃದ್ದಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಪಾಣೆಮಂಗಳೂರು ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ 47 ಲಕ್ಷ ರೂ. ವೆಚ್ಚದ ಮೀನು ಮಾರುಕಟ್ಟೆ ಕಟ್ಟಡವನ್ನು ರವಿವಾರ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈಅವರು ಉದ್ಘಾಟಿಸಿ, ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿದ್ದು, ಶೀಘ್ರವೇ ಪೂರ್ಣ ಗೊಳ್ಳಲಿವೆ ಎಂದು ಹೇಳಿದ್ದರು.

ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಿವೇದಿತ್ ಆಳ್ವ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಿರಿಯಣ್ಣ ಚಾತ್ರಬೆಟ್ಟು, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಪುರಸಭಾ ಉಪಾಧ್ಯಕ್ಷೆ ಯಾಸ್ಮೀನ್ ಹಾಮದ್, ಸದಸ್ಯೆ ಚಂಚಲಾಕ್ಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್.ಮುಹಮ್ಮದ್, ತಾಪಂ ಸದಸ್ಯ ಪದ್ಮಶೇಖರ್ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್, ಬಿ.ಎಂ.ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಸದಾಶಿವ ಬಂಗೇರ, ಬಿ.ವಾಸು ಪೂಜಾರಿ, ಮುಹಮ್ಮದ್ ನಂದರಬೆಟ್ಟು, ಮುಹಮ್ಮದ್ ಶರೀಫ್, ರಾಮಕೃಷ್ಣ ಆಳ್ವ, ಜಗದೀಶ್ ಕುಂದರ್, ಬಿ. ಪ್ರವೀಣ್, ಗಂಗಾಧರ್, ಜೆಸಿಂತಾ, ಸಂಜೀವಿನಿ, ಪ್ರಭಾ ಆರ್. ಸಾಲ್ಯಾನ್, ನಾಮನಿರ್ದೇಶಿತ ಸದಸ್ಯರಾದ ಅಬೂಬಕರ್ ಸಿದ್ದೀಕ್, ನೋರ್ಬರ್ಟ್ ರೊಡ್ರಿಗಸ್, ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಮೊದಲಾದವರು ಉಪಸ್ಥಿತರಿದ್ದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಸ್ವಾಗತಿಸಿದರು. ಪುರಸಭಾ ಮುಖ್ಯಾಧಿಕಾರಿ ಸುಧಾಕರ್ ಭಟ್ ವಂದಿಸಿದರು. ರಾಜೀವ್ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.

Write A Comment