ಕನ್ನಡ ವಾರ್ತೆಗಳು

ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳಿಂದ ಆರೋಪಿ ಸಹಿತಾ ಚಿನ್ನ ವಶ

Pinterest LinkedIn Tumblr

Gold_Sized_airport1

ಕಡತ ಚಿತ್ರ

ಮಂಗಳೂರು : ದುಬೈಯಿಂದ ಮಂಗಳೂರಿಗೆ ಎರಡು ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಆರೋಪಿ ಸಹಿತಾ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಕಪ್ಪು ಲೋಹದ ಬಣ್ಣದ ತಂತಿಯನ್ನೊಳಗೊಂಡ ಇಸ್ತ್ರಿ ಪೆಟ್ಟಿಗೆ ( ಐರನ್ ಬಾಕ್ಸ್‌ನೊಳಗಡೆ) ಸುಮಾರು 53 ಲಕ್ಷ ರೂ. ಮೌಲ್ಯದ ಎರಡು ಕೆ.ಜಿ.ಯಷ್ಟು ಚಿನ್ನದ ಗಟ್ಟಿಯಿರುವುದನ್ನು ಏರ್‌ಪೋರ್ಟ್‌ನಲ್ಲಿ ತಪಾಸಣೆ ವೇಳೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಜಿಲ್ಲಾ ಮುಖ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

Write A Comment