ಕನ್ನಡ ವಾರ್ತೆಗಳು

ಸಹಕಾರಿ ಸಪ್ತಾಹ ಸಮಾರೋಪ : ಎಂ.ಸಿ.ಎಸ್. ಬ್ಯಾಂಕ್ ನಿಂದ ಡಾ.ಮೋಹನ ಆಳ್ವರಿಗೆ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ

Pinterest LinkedIn Tumblr

Mohan_alva_sanmana

ಮೂಡುಬಿದಿರೆ, ನ.21: ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಬ್ಯಾಂಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ಸಹಕಾರ ಇಲಾಖೆ, ಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳು ಇವುಗಳ ಸಂಯುಕ್ತ ಆಶ್ರಯದಲ್ಲಿ ಎಂಸಿಎಸ್ ಬ್ಯಾಂಕ್‌ನಲ್ಲಿ ನಡೆದ ಸಹಕಾರಿ ಸಪ್ತಾಹ ಸಮಾರೋಪಗೊಂಡಿತು.

ಸಮಾರಂಭದಲ್ಲಿ ಎಂ.ಸಿ.ಎಸ್. ಬ್ಯಾಂಕ್ ನೀಡುವ ನಾಲ್ಕನೆ ವರ್ಷದ ಸಹಕಾರಿ ಕಲ್ಪವೃಕ್ಷ ಪ್ರಶಸ್ತಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅವರಿಗೆ ಮಣಿಪಾಲ ಮಾಹೆಯ ನಿವೃತ್ತ ಉಪಕುಲಪತಿ ಡಾ. ಬಿ.ಎಂ.ಹೆಗ್ಡೆ ಅವರು ಹತ್ತು ಗ್ರಾಂ ಚಿನ್ನದ ನಾಣ್ಯ ಹಾಗೂ ಬೆಳ್ಳಿಯ ಸ್ಮರಣಿಕೆಯನ್ನು ಶುಕ್ರವಾರ ನೀಡಿ ಪ್ರಶಸ್ತಿ ಪ್ರದಾನ ಮಾಡಿದರು.

ಬ್ಯಾಂಕಿನ ಅಧ್ಯಕ್ಷ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಎಂ.ಸಿ.ಎಸ್ ಬ್ಯಾಂಕಿನ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.

ಸನ್ಮಾನಗಳು :

ಬ್ಯಾಂಕಿನ ಸಕ್ರಿಯ ಹಿರಿಯ 10 ಮಂದಿ ಸದಸ್ಯರಿಗೆ ಸಹಕಾರ ಪ್ರಶಸ್ತಿ, ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದ ವ್ಯವಸ್ಥಾಪಕರು ಮತ್ತು ಇಲಾಖಾಕಾರಿಗಳ ಸನ್ಮಾನ, ಸಹಕಾರಿ ತರಬೇತಿ ಕೇಂದ್ರದ ರ್ಯಾಂಕ್ ವಿಜೇತರಿಗೆ ಸನ್ಮಾನ, ವಿಕಲ ಚೇತನ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಹಾಗೂ ಇನ್ನಿತರರಿಗೆ ಸನ್ಮಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷೆ ರೂಪಾ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಕಿಶನ್ ಹೆಗ್ಡೆ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಬಾಸ್ಕರ ಎಸ್.ಕೋಟ್ಯಾನ್, ಕಲ್ಲಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ವರದರಾಯ ಕಾಮತ್, ಜಿಲ್ಲಾ ಹಾಲು ಉತ್ಪಾಕರ ಒಕ್ಕೂಟದ ನಿರ್ದೇಶಕ ದಯಾನಂದ ಪೈ ಹಾಗೂ ಬ್ಯಾಂಕಿನ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬ್ಯಾಂಕಿನ ಕಾರ್ಯದರ್ಶಿ ಚಂದ್ರಶೇಖರ ಎಂ. ಸ್ವಾಗತಿಸಿದರು. ನಿರ್ದೇಶಕ ಪ್ರೇಮಾನಂದ ಪ್ರಭು ವಂದಿಸಿದರು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Write A Comment