ಕನ್ನಡ ವಾರ್ತೆಗಳು

ಪೇಜಾವರ ಸ್ವಾಮೀಜಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅಶ್ಲೀಲ ಹಾಗೂ ಮಾನಹಾನಿ ಬರಹ ; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮನವಿ

Pinterest LinkedIn Tumblr

pejavara-sree_facebook

ಉಡುಪಿ, ನ.24: ಪೇಜಾವರ ಮಠದ ಶ್ರೀವಿಶ್ವೇಶತೀರ್ಥರ ವಿರುದ್ಧ ಜಾಲತಾಣ ಫೇಸ್‌ಬುಕ್‌ನಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಬರಹವನ್ನು ಹಾಕಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈಯವರಿಗೆ ರವಿವಾರ ಮನವಿ ಮಾಡಿಕೊಳ್ಳಲಾಗಿದೆ.

ಪೇಜಾವರ ಮಠ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ರಾಘವೇಂದ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರತ್ನಕುಮಾರ್ ಹಾಗೂ ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್ಯರನ್ನೊಳಗೊಂಡ ಸಮಿತಿಯ ಸದಸ್ಯರ ನಿಯೋಗವೊಂದು ರವಿವಾರ ಎಸ್ಪಿಯನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ.

ಅಬ್ದುಲ್ ಸಲಾಮ್ ಎಂಬ ಹೆಸರಿನಲ್ಲಿ ಫೇಸ್‌ಬುಕ್‌ ಜಾಲತಾಣದಲ್ಲಿರುವ ವ್ಯಕ್ತಿಯೊಬ್ಬ ಶ್ರೀಗಳ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಸಂದೇಶಗಳನ್ನು ಮತ್ತು ಬೆದರಿಕೆಗಳನ್ನು ರವಾನಿಸಿದ್ದಾನೆ. ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತವಾಗಿ ಇಂತಹ ಸಮಾಜ ವಿರೋ ಸಂದೇಶಗಳನ್ನು ರವಾನಿಸುತ್ತಿರುವ ಜಾಲತಾಣ ಅಥವಾ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸ್ವೀಕರಿಸಿರುವ ಎಸ್ಪಿಯವರು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಬೆಂಗಳೂರಿನ ಸೈಬರ್ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ

Write A Comment