ಕನ್ನಡ ವಾರ್ತೆಗಳು

ಸಂಸದೀಯ ಕಾರ್ಯದರ್ಶಿಯಾಗಿ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಪ್ರಮಾಣ ವಚನ ಸ್ವೀಕಾರ

Pinterest LinkedIn Tumblr

Pramod m 1

ಉಡುಪಿ: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ವಿಧಾನ ಸೌಧದ ಮುಖ್ಯಮಂತ್ರಿಯವರ ಕೊಠಡಿಯಲ್ಲಿ ಸೋಮವಾರ ಸಂಜೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ಶಾಸಕ ಪ್ರಮೋದ್ ಮಧ್ವರಾಜ್ ಅವರಿಗೆ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಪ್ರಮೋದ್ ಮಧ್ವರಾಜ್ ಅವರು ಕನ್ನಡ ಭಾಷೆಯಲ್ಲಿ ಹಾಗೂ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಉನ್ನತ ಶಿಕ್ಷಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ, ಲೋಕೋಪಯೋಗಿ ಸಚಿವ ಡಾ ಹೆಚ್. ಸಿ. ಮಹದೇವಪ್ಪ, ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್. ಎಸ್. ಮಹದೇವ ಪ್ರಸಾದ್, ಮೂಲಭೂತ ಸೌಲಭ್ಯ ಮತ್ತು ಹಜ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್. ರೋಷನ್ ಬೇಗ್, ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಹೆಚ್. ಎಂ. ರೇವಣ್ಣ ಮತ್ತು ವಿ. ಎಸ್. ಉಗ್ರಪ್ಪ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ರಾಜ್ಯ ಸರ್ಕಾರದಲ್ಲಿನ ಸಂಸದೀಯ ಕಾರ್ಯದರ್ಶಿಗಳ ಸಂಖ್ಯೆ ಹನ್ನೊಂದಕ್ಕೆ ಏರಿದೆ.

Write A Comment