ಕನ್ನಡ ವಾರ್ತೆಗಳು

ವೆನ್ಲಾಕ್ ಆಸ್ಪತ್ರೆಯನ್ನು ಮಣಿಪಾಲ ಆಸ್ಪತ್ರೆಯಂತೆ ಸುಸಜ್ಜಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Pinterest LinkedIn Tumblr

Dc_Press_Meet_2

ಮಂಗಳೂರು, ನ.26: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯು ಸುಮಾರು ಒಂದೂವರೆ ಶತಮಾನದಷ್ಟು ಹಳೆಯದಾಗಿದ್ದು, ಈ ಕಟ್ಟಡವನ್ನು ಮುಂದಿನ 5 ವರ್ಷಗಳಲ್ಲಿ ಹಂತಹಂತವಾಗಿ ಅಭಿವೃದ್ಧಿಗೊಳಿಸಿಸಿ ಮಣಿಪಾಲ ಆಸ್ಪತ್ರೆಯಂತೆ ಸುಸಜ್ಜಿ ತಗೊಳಿಸಲು ಜಿಲ್ಲಾಧಿಕಾರಿ ಹಾಗೂ ವೆನ್ಲಾಕ್ ಜಿಲ್ಲಾಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಎ.ಬಿ.ಇಬ್ರಾಹೀಂ ಸೂಚಿಸಿದ್ದಾರೆ.

ಅವರು ಇಂದು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿ, ಸಭೆಯಲ್ಲಿ ಹಾಜರಿದ್ದ ಕೆಎಂಸಿ ಡೀನ್ ಡಾ.ವೆಂಕಟರಾಯ ಪ್ರಭುಗೆ ಈ ಕುರಿತು ಸೂಚಿಸಿದರು.

ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆಯಲ್ಲಿ ವೆನ್ಲಾಕ್ ದ್ವಿತೀಯ ಕಾಯಕಲ್ಪಯೋಜನೆಯಡಿಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆ ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್‌ಮೆಂಟ್‌ನಲ್ಲಿ ರಾಜ್ಯದಲ್ಲಿ ದ್ವಿತೀಯ ಬಹುಮಾನ ಗಳಿಸಿದೆ. ಬಹುಮಾನದ ಮೊತ್ತವಾಗಿ ಆಸ್ಪತ್ರೆಗೆ 20 ಲಕ್ಷ ರೂ. ದೊರಕಲಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕ್ಷಿ ಡಾ.ರಾಜೇಶ್ವರಿದೇವಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್ ಮೊದಲಾದವರು ಉಪಸ್ಥಿತರಿದ್ದರು.

Write A Comment