ಕನ್ನಡ ವಾರ್ತೆಗಳು

“ಮಿಷನ್ ಇಂದ್ರಧನುಷ್” ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

Pinterest LinkedIn Tumblr

indra_danush_vaccin

ಮಂಗಳೂರು, ಡಿ.01: ಇಂದ್ರಧನುಷ್ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಮಂಗಳೂರು ಮಹಾನಗರದಲ್ಲಿ ಪಾಲಿಕೆಯು ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ಸಮಿತಿ ರಚಿಸಿ ಕಾರ್ಯ ಪ್ರವೃತ್ತವಾಗಬೇಕು ಎಂದು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಸೂಚನೆ ನೀಡಿದ್ದಾರೆ.

ಅವರು ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎರಡನೆ ಹಂತದ ‘ಮಿಷನ್ ಇಂದ್ರಧನುಷ್’ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಮತ್ತು ಮೂರನೆ ಹಂತದ ಚಾಲನೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದ.ಕ. ಜಿಪಂ ಸಿಇಒ ಶ್ರೀವಿದ್ಯಾ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಅಂಗನವಾಡಿಯಲ್ಲಿರುವ ಗರ್ಭಿಣಿ ಮಹಿಳೆಯರ ಮತ್ತು ಮಕ್ಕಳ ನೋಂದಣಿ ಆಧಾರದಲ್ಲಿ ಮುಂದಿನ ಸುತ್ತಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯಕ್ರಮದ ಅನುಷ್ಠಾನ ನಡೆಯಬೇಕು ಎಂದರು.

ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ನೋಡಲ್ ಅಧಿಕಾರಿ ಡಾ.ಸತೀಶ್ಚಂದ್ರ, ಜಿಲ್ಲಾ ಸರ್ಜನ್ ಡಾ.ರಾಜೇಶ್ವರಿದೇವಿ, ಸರ್ವೇಕ್ಷಣಾಧಿಕಾರಿ ಡಾ.ಸಿಕಂದರ್ ಪಾಷಾ ಉಪಸ್ಥಿತರಿದ್ದರು.

Write A Comment