ಕನ್ನಡ ವಾರ್ತೆಗಳು

ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ

Pinterest LinkedIn Tumblr

ಕುಂದಾಪುರ: ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರು ಬುಧವಾರ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿದರು.

Eshwarappa_Visit_Kolluru Temple

ಖಾಸಗಿ ಕಾರ್ಯಕ್ರಮ ನಿಮಿತ್ತ ಕುಂದಾಪುರಕ್ಕೆ ಆಗಮಿಸಿದ್ದ ವೇಳೆ ಶ್ರೀ ದೇವಳಕ್ಕೆ ಆಗಮಿಸಿದ ಅವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀನಿವಾಸ್ ಕಲ್ಲೂರಾಯ, ದೇವಳದ ಅಧೀಕ್ಷಕ ರಾಮಕೃಷ್ಣ ಅಡಿಗ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.

Write A Comment