ಕನ್ನಡ ವಾರ್ತೆಗಳು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ ಇಂಧನ ಸಚಿವ ಡಿ.ಕೆ.ಶಿ.

Pinterest LinkedIn Tumblr

ಕುಂದಾಪುರ: ಕರ್ನಾಟಕ ರಾಜ್ಯ ಸರಕಾರದ ಇಂದನ ಸಚಿವ ಡಿ.ಕೆ. ಶಿವಕುಮಾರ್ ದಂಪತಿಗಳು ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಳದಲ್ಲಿ ಚಂಡಿಕಾಹೋಮ, ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.

????????????????????????????????????

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು ಡಿಸೆಂಬರ್ 15ರ ಬಳಿಕ ಈ ಬಗ್ಗೆ ಗಮನಹರಿಸಲಾಗುವುದು ಎಂದು ಹೇಳಿದರು. ಹೊಸ ಬೆಳಕು ಎಂಬ ಯೋಜನೆಯಡಿಯಲ್ಲಿ ವಿದ್ಯುತ್ ಮಿತ ಬಳಕೆಗಾಗಿ ಎಲ್‌ಇಡಿ ಬೆಲ್ಬ್ ನೀಡುವ ಯೋಜನೆಗೆ ಚಾಲನೆ ನೀಡಲಾಗಿದ್ದು ಇದೇ ತಿಂಗಳ ಲ್ಲಿ ಅಧೀಕ್ರತವಾಗಿ ಅದನ್ನು ವಿತರಿಸಲಾಗುತ್ತದೆ ಎಂದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಸಚಿವರನ್ನು ಗೌರವಿಸಿದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ, ತಾಲೂಕು ಪಂಚಾಯತ್ ಸದಸ್ಯ ರಾಜು ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ಮೊದಲಾದವರಿದ್ದರು.

Write A Comment