ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಡಿವೈಡರಿಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಉಡುಪಿಯ ಎಂ.ಜಿ.ಎಂ. ಕಾಲೇಜು ಮುಂಭಾಗ ಶನಿವಾರ ರಾತ್ರಿ ನಡೆದಿದೆ.
ಗಜಾನನ ನಾಯಕ್ ಹಾಗೂ ಇನ್ನೋರ್ವ ವ್ಯಕ್ತಿ ಮಣಿಪಾಲ ಮಾರ್ಗದಿಂದ ಉಡುಪಿಯತ್ತ ಕಾರಿನಲ್ಲು ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿಹೊಡೆದಿದೆ. ಅತೀ ವೇಗದಲಿದ್ದ ಕಾರಣ ಘಟನೆ ಸಂಬವಿಸಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





