ಕನ್ನಡ ವಾರ್ತೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ : 38ನೆ ವರ್ಷದ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

Pinterest LinkedIn Tumblr

Darmastl_exbiton_pic_1

ಬೆಳ್ತಂಗಡಿ, ಡಿ.7: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ 38ನೆ ವರ್ಷದ ರಾಜ್ಯ ಮಟ್ಟದ ವಸ್ತುಪ್ರದರ್ಶನವನ್ನು ರವಿವಾರ ಸಂಜೆ ದ.ಕ. ಜಿಪಂ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಜನರಿಗೆ ಅನುಕೂಲವಾಗಲು ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. ಕೃಷಿ ಕ್ಷೇತ್ರದಲ್ಲಿನ ಬೆಳವಣಿಗೆಗಳನ್ನು ಅತ್ಯಂತ ಸುಲಭವಾಗಿ ಇಲ್ಲಿ ತಿಳಿದುಕೊಳ್ಳಬಹುದಾಗಿದೆ ಎಂದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಶ್ರೀ ಕ್ಷೇತ್ರದಲ್ಲಿ ಲಕ್ಷದೀಪೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಾಂಸ್ಕೃತಿಕ, ಸಾಹಿತ್ಯಿಕ, ಹಾಗೂ ವಸ್ತು ಪ್ರದರ್ಶನಗಳಂತಹ ಕಾರ್ಯಕ್ರಮಗ ಳನ್ನು ಆಯೋಜಿಸಲಾಗುತ್ತಿದೆ. ರಾಜ್ಯ ಮಟ್ಟದ ವಸ್ತುಪ್ರದರ್ಶನ ಜಗತ್ತಿನ ವಿವಿಧ ಕ್ಷೇತ್ರಗಳಲ್ಲಿನ ಹೊಸ ಬೆಳವಣಿಗೆಗಳನ್ನು ಪರಿಚಯಿಸುವ ಕಾರ್ಯವನ್ನು ಮಾಡು ತ್ತಿದೆ ಎಂದರು. ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಉಪಸ್ಥಿತರಿದ್ದರು. ಜಗ ದೀಶ್ ಪ್ರಸಾದ್ ಸ್ವಾಗತಿಸಿದರು. ಬಿ.ಎ. ಕುಮಾರಹೆಗ್ಡೆ ಕಾರ್ಯಕ್ರಮ ನಿರೂಪಿಸಿ ದರು. ಸುನೀಲ್ ವಂದಿಸಿದರು.

Darmastl_exbiton_pic_2

ರಾಜ್ಯಮಟ್ಟದ ವಸ್ತುಪ್ರದರ್ಶನದಲ್ಲಿ 170ಕ್ಕೂ ಹೆಚ್ಚು ಮಳಿಗೆಗಳಿದ್ದು, ವಿವಿಧ ಬ್ಯಾಕ್‌ಗಳು, ವಿಮಾ ಕಂಪೆನಿಗಳು, ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಗಾರರು, ಸರಕಾರದ ವಿವಿಧ ಇಲಾಖೆ ಗಳು, ಪುಸ್ತಕ ಮಳಿಗೆಗಳು, ಬಟ್ಟೆ ಮಳಿಗೆ ಗಳು, ವೈವಿಧ್ಯಮಯ ತಿಂಡಿ ತಿನಿಸುಗಳು, ವಿವಿಧ ವಾಹನ ಕಂಪೆನಿಗಳ ಮಳಿಗೆಗಳು ವಿಶೇಷ ಆಕರ್ಷಣೆಯಾಗಿದೆ.

ಪಾದಯಾತ್ರೆ ಸಮಾರೋಪ:

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುತ್ತಿರುವ ಜನಪರ ಕಾರ್ಯ ಕ್ರಮಗಳು ದೇವರ ಅನುಗ್ರಹದಿಂದ ಯಶಸ್ವಿಯಾಗಿ ನಡೆಯುತ್ತಿದೆ. ಎಲ್ಲ ಜನರ ಪ್ರೀತಿ, ವಿಶ್ವಾಸದಿಂದ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ರವಿವಾರ ಶ್ರೀಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಭಕ್ತರು ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆಸಿದ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕ್ಷೇತ್ರದ ವತಿಯಿಂದ ನಡೆಯುತ್ತಿರುವ ಎಲ್ಲ ಸಂಸ್ಥೆಗಳೂ ಶಿಸ್ತುಬದ್ಧವಾಗಿ ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಎಲ್ಲವೂ ಮುಕ್ತ ವಿಚಾರಗಳಾಗಿದ್ದು, ಯಾವುದೇ ಮುಚ್ಚುಮರೆ ಗಳಿಲ್ಲ. ಕೆಲವರು ಉದ್ದೇಶಪೂರ್ವಕವಾಗಿ ಆರೋಪಗಳನ್ನು ಮಾಡುತ್ತಿದ್ದು, ಈ ಆರೋಪಗಳಿಗೆ ಯಾರೂ ಕಿವಿಕೊಡುವ ಅಗತ್ಯವಿಲ್ಲ ಎಂದರು. ಪಾದಯಾತ್ರೆ ಸಮಿತಿಯ ಸಂಚಾಲಕ ಪ್ರತಾಪಸಿಂಹ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡುವೆಟ್ನಾಯ, ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು. ಕಿಶೋರ್ ಹೆಗ್ಡೆ ಸ್ವಾಗತಿಸಿದರು.

Write A Comment