ಮಂಗಳೂರು,ಡಿ.7 : ದ.ಕ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನವಣೆಯಲ್ಲಿ ಸ್ಪರ್ಧಿಸಲು 2 ರಾಷ್ಟ್ರೀಯ ಪಕ್ಷಗಳಿಂದ ಇಬ್ಬರು ಅಭ್ಯರ್ಥಿಗಳು ಸೇರಿದಂತೆ ಒಬ್ಬರು ಜಾತ್ಯಾತೀತ ಜನತಾದಳ (ಜಾ) 3 ಅಭ್ಯರ್ಥಿಗಳು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ವತಿಯಿಂದ ಶ್ರೀನಿವಾಸ ಪೂಜಾರಿಯವರು ಒಟ್ಟು 3 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ ಕೆ.ಪ್ರತಾಪ ಚಂದ್ರ ಶೆಟ್ಟಿ ಇವರು 3 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಉಳಿದಂತೆ ಪಕ್ಷೇತರ ಅಭ್ಯರ್ಥಿಯಾಗಿ ಎ.ಎಂ ಇಸ್ಮಾಯಿಲ್, ಜಯಪ್ರಕಾಶ ಹೆಗ್ಡೆ (2 ನಾಮಪತ್ರ) ಹಾಗೂ ಭುಜಂಗ ಶೆಟ್ಟಿ ಇವರು ನಾಮಪತ್ರ ಸಲ್ಲಿಸಿದ್ದಾರೆ. ಜನತಾದಳ (ಜಾ) ಪಕ್ಷದಿಂದ ಪ್ರವೀಣ ಚಂದ್ರ ಇವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಬಿಜೆಪಿಯ ಅಧಿಕೃತ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾದ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಜೆಡಿಎಸ್ ಅಭ್ಯರ್ಥಿ ಪ್ರವೀಣ್ ಚಂದ್ರ ಜೈನ್ ಅವರು ಸೋಮವಾರ ತಮ್ಮ ತಮ್ಮ ಬೆಂಬಲಿಗರೊಂದಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮ ಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಬೆಳಿಗ್ಗೆ ಬಿಜೆಪಿ ಜಿಲಾಧ್ಯಕ್ಷ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ನಿಕ್, ಶಾಸಕರುಗಳಾದ ಸುನೀಲ್ ಕುಮಾರ್, ಅಂಗಾರ, ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್, ಮಾಜಿ ಎಮ್‌ಎಲ್‌ಸಿ ಮೋನಪ್ಪ ಭಂಡಾರಿ, ಮಾಜಿ ಶಾಸಕ ರುಕ್ಮಯ ಪೂಜಾರಿ, ಮನಪಾ ಸದಸ್ಯರಾದ ಸುಧೀರ್ ಕಣ್ಣೂರು, ರೂಪಾ.ಡಿ.ಬಂಗೇರ ಸೇರಿದಂತೆ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಪ್ರತಾಪ್ ಚಂದ್ರ ಶೆಟ್ಟಿಯವರು ಇಂದು ಬೆಳಿಗ್ಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ್ ರೈ, ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಶಾಸಕರಾದ ಮೊಯ್ದಿನ್ ಬಾವ, ಐವನ್ ಡಿ’ಸೋಜ್, ಪ್ರಮೋದ್ ಮಧ್ವರಾಜ್ ಮೂಡಾ ಅಧ್ಯಕ್ಷ ಇಬ್ರಾಹೀಂ ಕೊಡಿಜಾಲ್ ಹಾಗೂ ತಮ್ಮ ಹಲವಾರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದರು.
ಕಾಂಗ್ರೆಸ್‌ಗೆ ಬಂಡಾಯದ ಬಿಸಿ :
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಹಾಗೂ ಭುಜಂಗ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.













