ಕನ್ನಡ ವಾರ್ತೆಗಳು

ಡಿ.24ರಿಂದ 27ರವರೆಗೆ ಪಿಲಿಕುಳ ನಿಸರ್ಗಧಾಮದಲ್ಲಿ ಕ್ರಿಸ್‌ಮಸ್ ಹಬ್ಬ :

Pinterest LinkedIn Tumblr

Pilikula_photo_1

ಮಂಗಳೂರು, ಡಿ.8: ವಿವಿಧ ಅಕಾಡಮಿಗಳ ವತಿಯಿಂದ ಡಿ.24ರಿಂದ 27ರವರೆಗೆ ಪಿಲಿಕುಳ ನಿಸರ್ಗಧಾಮದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಮಕ್ಕಳ ಹಬ್ಬವನ್ನು ಆಯೋಜಿಸಲು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಡಿ.24ರಂದು ಕೊಡವ, ಅರೆಭಾಷೆ, ಬ್ಯಾರಿ ಅಕಾಡಮಿಗಳ ವತಿಯಿಂದ ಉದ್ಘಾಟನಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಡಿ.25 ರಂದು ಕೊಂಕಣಿ ಅಕಾಡಮಿ ವತಿಯಿಂದ ಕೊಂಕಣಿ ಭಾಷೆಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲುತೀರ್ಮಾನಿಸಲಾಯಿತು.

ಡಿ.26ರಂದು ತುಳು ಸಾಹಿತ್ಯ ಅಕಾಡಮಿ ವತಿಯಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಡಿ.27ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗುವುದು.

ಪಿಲಿಕುಳದಲ್ಲಿ ನಡೆಯುವ ಕ್ರಿಸ್ ಮಸ್ ಮೇಳದಲ್ಲಿ ವಿವಿಧ ಬಗೆಯ ಕೇಕ್‌ಗಳ ತಯಾರಿಕೆ ಪ್ರದರ್ಶನ, ಮಾರಾಟ ಮತ್ತು ಕೇಕ್‌ಗಳ ತಯಾರಿಕೆ ಸ್ಫರ್ಧೆಯನ್ನು ಏರ್ಪಡಿಸಲಾಗುವುದು. ಇದಲ್ಲದೆ ಬೆಂಕಿ ಇಲ್ಲದೆ ಅಡುಗೆ ಮಾಡುವ ಸ್ಫರ್ಧೆ ಮತ್ತು ಮನೆಯಲ್ಲೇ ತಯಾರಿಸಿಕೊಂಡು ಬಂದ ಗ್ರೀಟಿಂಗ್ ಕಾರ್ಡ್‌ಗಳ ಸ್ಫರ್ಧೆಯನ್ನು ಏರ್ಪಡಿಸಲಾಗುವುದು.

ಇದೇ ಸಂದರ್ಭದಲ್ಲಿ ಬ್ಯಾರಿ, ಕ್ರಿಶ್ಚಿಯನ್, ಹಿಂದೂ ಸೇರಿದಂತೆ ಇತರೇ ಜನಾಂಗಗಳ ಸಾಂಪ್ರದಾಯಿಕ ಅಹಾರ ಮೇಳವನ್ನೂ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ಅಧಿಕಾರಿ ಪ್ರಭಾಕರ ಶರ್ಮ, ಸಾಹಿತಿ ಬಿ.ಎ. ವಿವೇಕ ರೈ, ಕೊಂಕಣಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ, ಬ್ಯಾರಿ ಅಕಾಡಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.

Write A Comment