ಬಂಟ್ವಾಳ, ಡಿ.12: ತಾಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಬುಧವಾರ ನಡೆದ ರೌಡಿಶೀಟರ್ ಮಾದ ಹನೀಫ್ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಮುಖ ಮೂವರು ಆರೋಪಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿಗಳನ್ನು ಶನಿವಾರ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ನಿರೀಕ್ಷೆಯಿದೆ. ಪ್ರಕರಣದಲ್ಲಿ ಐವರು ಶಾಮೀಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ.
ಆಟೊ ಚಾಲಕ ರಿಫಾಯಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಹನೀಫ್‌ನನ್ನು ಬುಧವಾರ ಪ್ರತೀಕಾರವಾಗಿ ಕೊಲೆಗೈಯಲು ಯತ್ನಿಸಿದ್ದ ಘಟನೆ ನಡೆದಿತ್ತು. ದುಷ್ಕರ್ಮಿಗಳು ಕೃತ್ಯಕ್ಕೆ ಬಳಸಿದ್ದ ಆಲ್ಟೊ ಕಾರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್‌ವೊಂದರ ಬಳಿ ಗುರುವಾರ ಪತ್ತೆಯಾಗಿತ್ತು.