ಕನ್ನಡ ವಾರ್ತೆಗಳು

ಕುಖ್ಯಾತ ಕಳ್ಳನ ಬಂಧನ.

Pinterest LinkedIn Tumblr

konaje_theft_aressrest

ಕೊಣಾಜೆ, ಡಿ.18: ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಚರ್ಚ್ ಹಾಗೂ ಇನ್ನಿತರ ಕಡೆಗಳಲ್ಲಿ ಕಳ್ಳತನ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಕೊಣಾಜೆ ಪೊಲೀಸರು ಬಂಧಿಸಿ, ಕದ್ದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಾವೂರು ಗ್ರಾಮದ ಮಲಾರ್‌ನ ಅಕ್ಷರನಗರದ ಅಬ್ದುಲ್ ಜಾರ್(19) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಕಳೆದ ಕೆಲವು ದಿನಗಳ ಹಿಂದೆ ಪಜೀರಿನ ಚರ್ಚ್‌ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಈತ ಭಾಗಿಯಾಗಿದ್ದ ಮಾತ್ರವಲ್ಲದೇ ದೇರಳಕಟ್ಟೆ ಮೊಬೈಲ್ ಹಾಗೂ ಫ್ಯಾನ್ಸಿ ಅಂಗಡಿಗಳಲ್ಲಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಎನ್ನಲಾಗಿದೆ. ಚರ್ಚ್ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಸಿದಂತೆ ಪೊಲೀಸರು ಅಝರುದ್ದೀನ್, ಮುಷ್ತಾಕ್ ಹಾಗೂ ಅಫ್ರೀಝ್ ಎಂಬವರನ್ನು ಕಳೆದ ಕೆಲವು ದಿನಗಳ ಹಿಂದೆಯೇ ಬಂಧಿಸಿದ್ದರು.

ಬಳಿಕ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಜಾರ್ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಚರ್ಚ್‌ನಲ್ಲಿ ಕಳ್ಳತನ ನಡೆಸಿದ ಕೆಲವು ಪೂಜಾ ಸಾಮಗ್ರಿಗಳು, ಆರು ಮೊಬೈಲ್‌ಗಳನ್ನು, ಕಳ್ಳತನ ನಡೆಸಿದ್ದ ಎರಡು ಬೈಕ್‌ಗಳನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಈತನ ಜತೆಗೆ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Write A Comment