ಕಡಬ, ಡಿ.25: ಕಡಬ-ಸುಬ್ರ ಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಾಬೆ ಗ್ರಾಮದ ಕೋಚಕಟ್ಟೆ ಎಂಬಲ್ಲಿ ಕಾರೊಂದು ಎರಡು ಬೈಕ್‌ಗಳಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಬಳಿಕ ಚರಂಡಿಗೆ ಪಲ್ಟಿಯಾದ ಘಟನೆ ಗುರುವಾರ ಸಾಯಂಕಾಲ ನಡೆದಿದೆ.
ಕಾರು ಉರುಳಿ ಬಿದ್ದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ಸಂಚರಿಸುತ್ತಿದ್ದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಹಂಝರವರು ಗಂಭೀರ ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೋರ್ವ ಬೈಕ್ ಸವಾರ ಮೋನಪ್ಪ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸಿದ್ದಾರೆ.