ಉಡುಪಿ: ಮಾಜಿ ಜಿಲ್ಲಾಪಂಚಾಯತ್ ಉಪಾಧ್ಯಕ್ಷೆ, ಕಾಂಗ್ರೆಸ್ ಮುಖಂಡರಾದ ಶಾರದಾ ಡಿ. ಬಿಜೂರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಂದ ಪಕ್ಷದ ಬಾವುಟ ಪಡೆಯುವ ಮೂಲಕ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಬಿಜೆಪಿಗೆ ಸೇರ್ಪಡೇಗೊಂಡಿದ್ದಾರೆ. ಈ ಸಂದರ್ಭದಲ್ಲಿ ಇದೇ ಸಂದರ್ಭ ಪ್ರಿಯದರ್ಶಿನಿ ಬಿಜೂರು ಮತ್ತು ಮಿಥುನ್ ಬಿಜೂರು ಕೂಡ ಬಿಜೆಪಿಗೆ ಸೇರ್ಪಡೆಯಾದರು.
ಕಾರ್ಯಕ್ರಮದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ,ರಾಜ್ಯ ಬಿಜೆಪಿ ಪದಾಧಿಕಾರಿ ಶ್ಯಾಮಲಾ ಕುಂದರ್, ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.